

ಧಾರವಾಡ: ಯುವಕರಿಗೆ ಸಂಗೊಳ್ಳಿ ರಾಯಣ್ಣ ಸ್ಫೂರ್ತಿ. ಪ್ರಪಂಚಕ್ಕೆ ಏಕತೆಯ ಸಂದೇಶ ಸಾರಿದ ಭಾರತದ ಸಂಸ್ಕೃತಿ ಅರಿತು ನಡೆಯಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಬೆಂಗಳೂರಿನ ಕನಕಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾವ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಭಾವಂತರಿಗೆ ಆರ್ಥಿಕ ಸಹಾಯದ ಜೊತೆಗೆ ಪ್ರೋತ್ಸಾಹ ಅಗತ್ಯ. ವಿದ್ಯಾರ್ಥಿಗಳು ಅಂಕಗಳ ಜೊತೆಗೆ ಸಾಮಾನ್ಯ ಜ್ಞಾನ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಅಂತಹ ಶಿಕ್ಷಣ ಇಂದಿನ ಅಗತ್ಯ. ನಮ್ಮ ದುಡಿಮೆಯ ಸ್ವಲ್ಪ ಭಾಗವನ್ನು ಧರ್ಮ, ಶಿಕ್ಷಣ, ಸಮಾಜದ ಕಾರ್ಯಕ್ಕೆ ಬಳಸಲು ಮೀಸಲಿಡಬೇಕು. ಕುಲಕುಲ ಎಂದು ಹೊಡೆದಾಡದಿರಿ ಎಂಬ ಸಂದೇಶ ಸಾರಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತ ಮಾಡಬಾರದು ಎಂದರು.
ಅಧ್ಯಕ್ಷತೆ ವಹಿಸಿದ್ದ ಕನಕಶ್ರೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಟಿ.ಬಿ. ಬೆಳಗಾವಿ ಮಾತನಾಡಿ, ಕುರುಬ ಸಮಾಜದ ಜನಪ್ರತಿನಿಽಗಳು, ಮುಖಂಡರು ಹಾಗೂ ನೌಕರರು ವಿದ್ಯಾಸಂಸ್ಥೆಗಳನ್ನು ಕಟ್ಟಬೇಕು ಎಂದರು.
ವಿಶ್ರಾ0ತ ಕುಲಪತಿ ಡಾ. ಮಲ್ಲಿಕಾ ಘಂಟಿ ಹಾಗೂ ಮನಸೂರು ರೇವಣಸಿದ್ಧೇಶ್ವರ ಮಠದ ಡಾ. ಬಸವರಾಜ ದೇವರು ಮಾತನಾಡಿದರು.
ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳ ಕುರುಬ ಸಮಾಜದ 204 ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿ ನಗದು, ಪ್ರಮಾಣಪತ್ರ ನೀಡಲಾಯಿತು.
ಮÁಜಿ ಸಂಸದ ಕೆ. ವಿರೂಪಾಕ್ಷಪ್ಪ, ಬೆಳಗಾವಿ ನಗರಾಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಲಕ್ಷ÷್ಮಣರಾವ್ ಚಿಂಗಳೆ, ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ದೇವರಾಜ ಕಂಬಳಿ, ರಾಜೇಶ್ವರಿ ಸಾಲಗಟ್ಟಿ, ಇತರರು ಉಪಸ್ಥಿತರಿದ್ದರು.