

ಮಂಡ್ಯ: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಸಾಲಿನಲ್ಲಿ 2ನೇ ಸ್ಥಾನದಲ್ಲಿದ್ದ ಮಂಡ್ಯ ಜಿಲ್ಲೆ ಈ ಬಾರಿ ಬರೋಬರಿ 17 ಸ್ಥಾನ ಕುಸಿತದೊಂದಿಗೆ 19ನೇ ಸ್ಥಾನಕ್ಕಿಳಿದಿದೆ.
ಈ ಬಾರಿ ಜಿಲ್ಲೆಯಲ್ಲಿ 20,529 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 15,108 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.73.59 ಫಲಿತಾಂಶ ಬಂದಿದೆ. ಇದು ಇತ್ತೀಚಿನ ವರ್ಷದಲ್ಲಿ ಬಂದ ಅತಿ ಕಳಪೆ ಫಲಿತಾಂಶವಾಗಿದೆ. ಕಳೆದ ಸಾಲಿನಲ್ಲಿ ಶೇ.96.04 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿತ್ತು. 19,965 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇವರಲ್ಲಿ 19,133 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.