ಶೀಘ್ರದಲ್ಲೇ ಎಸ್ಸೆಸ್ಸೆಲ್ಸಿ ಫಲಿತಾಂಶ

result
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: 2020ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಪ್ರ

ಶ್ನೆಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಪರೀಕ್ಷಾ ಮಂಡಳಿ ಫಲಿತಾಂಶ ಪಟ್ಟಿ ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿದೆ. ಈ ನಡುವೆ, ಆ.7ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹರಡಿದ್ದ ಸುದ್ದಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಲ್ಲಗಳೆದಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಇನ್ನೂ ದಿನಾಂಕ ನಿಗದಿಯಾಗಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಜು.20ರಂದು ಸಚಿವರು ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net