ಎಸ್ಸೆಸ್ಸೆಲ್ಸಿಯಲ್ಲಿ ತುಮಕೂರು-16, ಮಧುಗಿರಿ-30ನೇ ಸ್ಥಾನ ಶಿರಾದ ಹರ್ಷಿತಾ ರಾಜ್ಯಕ್ಕೆ ದ್ವಿತೀಯ ಟಾಪರ್

SSLC_2ndTopper
Published on

ತುಮಕೂರು:ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ತುಮಕೂರು ಶೈಕ್ಷಣಿಕ ಜಿಲ್ಲೆ ಶೇ.75.16 ಫಲಿತಾಂಶ ಪಡೆದು 20ನೇ ಸ್ಥಾನದಿಂದ 16ನೇ ಸ್ಥಾನಕ್ಕೆ ಜಿಗಿದಿದೆ. ಮಧುಗಿರಿ ಶೈಕ್ಷಣಿಕ ಜಿಲ್ಲೆ ಶೇ.62.44 ಫಲಿತಾಂಶಗಳಿಸಿ 30ನೇ ಸ್ಥಾನಕ್ಕೆ ಕುಸಿದಿದೆ.

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿರಾ ನಗರದ ಶ್ರೀ ವಾಸವಿ ಇಂಗ್ಲೀಷ್ ಹೈಸ್ಕೂಲ್‌ನ ಡಿ.ಎಂ.ಹರ್ಷಿತಾ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಟಾಪರ್ ಎನಿಸಿದ್ದಾರೆ. ಹರ್ಷಿತಾ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಕಳೆದ ಸಾಲಿನಲ್ಲಿ ಶೇ.89.43 ಫಲಿತಾಂಶದೊಂದಿಗೆ ತುಮಕೂರು ಜಿಲ್ಲೆ 20ನೇ ಸ್ಥಾನದಲ್ಲಿತ್ತು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆ ಶೇ.93.23 ಫಲಿತಾಂಶ ಪಡೆದು 9ನೇ ಸ್ಥಾನದಲ್ಲಿತ್ತು. 2022ರಲ್ಲಿ ತುಮಕೂರು ಶೇ.91.65 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆ ಶೇ.94.15 ಫಲಿತಾಂಶ ಪಡೆದು ‘ಎ’ ಶ್ರೇಣಿ ಪಡೆದಿದ್ದವು.

30ನೇ ಸ್ಥಾನಕ್ಕೆ ಕುಸಿದ ಮಧುಗಿರಿ: ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 22198 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಈ ಪೈಕಿ 16683 ಮಕ್ಕಳು ತೇರ್ಗಡೆ ಹೊಂದಿದ್ದಾರೆ. ಶೇ.75.16 ರಷ್ಟು ಫಲಿತಾಂಶ ಬಂದಿದೆ. ಇನ್ನೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 12715 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಈ ಪೈಕಿ 7939 ಮಕ್ಕಳು ತೇರ್ಗಡೆ ಹೊಂದಿದ್ದಾರೆ. ಶೇ.62.44 ರಷ್ಟು ಫಲಿತಾಂಶ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net