

ಬೆಳಗಾವಿ : ಜಿಲ್ಲಾದ್ಯಂತ ಜೂ.13ರಂದು ಮಂಗಳವಾರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ವಿಜ್ಞಾನ ವಿಷಯದ ಪರೀಕ್ಷೆಗೆ 123 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ವಿಜ್ಞಾನ ವಿಷಯದ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 2,690 ವಿದ್ಯಾರ್ಥಿಗಳ ಪೈಕಿ ಜಿಲ್ಲೆಯ ಆರು ವಲಯಗಳ 15 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2,567 ವಿಧ್ಯಾರ್ಥಿಗಳು ಮಾತ್ರ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.