ಈಜುಲು ತೆರಳಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು

Sunil Lamani death
Published on

ಸವಣೂರ: ಈಜಲು ತೆರಳಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ತಾಲೂಕಿನ ಶಿರಬಡಗಿ ಗ್ರಾಮದ ಕೆರೆಯಲ್ಲಿ ಸೋಮವಾರ ಸಂಜೆ ನಡೆದಿದೆ. ಸುನೀಲ ಪರಮೇಶಪ್ಪ ಲಮಾಣಿ (16) ಮೃತ ದುರ್ದೈವಿ.

ಏ. 2ರಂದು ಗಣಿತ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ಸೋಮವಾರ ಮೃತಪಟ್ಟಿರುವುದು ಕುಟುಂಬಸ್ಥರಿಗೆ ದಿಗಿಲು ಮುಟ್ಟಿಸಿದೆ.

ಸ್ನೇಹಿತನೊಂದಿಗೆ ಈಜಲು ಹೋಗಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ವಿಷಯ ತಿಳಿದ ತಕ್ಷಣ ವಿದ್ಯಾರ್ಥಿ ಸುನೀಲನನ್ನು ಕೆರೆಯಿಂದ ಹೊರತಂದು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟಿದ್ದಾನೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net