

ಬಳ್ಳಾರಿ: ತಾಲೂಕಿನ ಸಿರಿವಾರದ ಗ್ರಾಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕರೊನಾ ಸೋಂಕು ದೃಢಪಟ್ಟಿದೆ.
ಗುರುವಾರ ಸಹಪಾಠಿಯೊಂದಿಗೆ ಪರೀಕ್ಷೆ ಬರೆದು ಊರಿಗೆ ಹಿಂದಿರುಗುವಾಗ ಬೈಕ್ ಆಯಾ ತಪ್ಪಿ ಬಿದ್ದು ಗಾಯಗೊಂಡಿದ್ದರು. ಈ ಪೈಕಿ ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಗೆ ಕರೊನಾ ದೃಢಪಟ್ಟಿದೆ.
ಸೋಂಕು ದೃಢಪಟ್ಟಿರುವ ವಿದ್ಯಾರ್ಥಿ ಹಾಗೂ ಸಹಪಾಠಿಯನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ದೂರ ಇಡಲಾಗಿದೆ. ವಿದ್ಯಾರ್ಥಿ ಪರೀಕ್ಷೆ ಬರೆದಿದ್ದ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಡಿಡಿಪಿಐ ಸಿ.ರಾಮಪ್ಪ ತಿಳಿಸಿದ್ದಾರೆ.
ಪರೀಕ್ಷೆಗೆ ಮುನ್ನವೇ ಸಂಡೂರು ಹಾಗೂ ಕೂಡ್ಲಿಗಿ ತಾಲೂಕಿನ ತಲಾ ಒಬ್ಬ ವಿದ್ಯಾರ್ಥಿಗೆ ಸೋಂಕು ತಗುಲಿತ್ತು. ಈ ಮೂಲಕ ಜಿಲ್ಲೆಯಲ್ಲಿ ಕರೊನಾ ಸೋಂಕಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.