ವಿದ್ಯಾರ್ಥಿಗಳಿಗೆ ಯಶಸ್ಸು ಕಾರ್ಯಾಗಾರ

Published on

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಶಿರೂರ ಪಾರ್ಕ್ ಅಕ್ಷಯ ಕಾಲನಿಯಲ್ಲಿರುವ ಇಂಪಲ್ಸ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಎಸ್ಎಸ್ಎಲ್ಸಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಸಂಬಂಧಿಸಿ ಯಶಸ್ಸು- 2ಕೆ24 ಕಾರ್ಯಾಗಾರವನ್ನು ಜ. 22ರಿಂದ 24ರ ವರೆಗೆ ಆಯೋಜಿಸಲಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆಯುವ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಪ್ರಶ್ನೆ ಪತ್ರಿಕೆ ಬಿಡಿಸುವ ಜತೆಗೆ ಗಣಿತ ಮತ್ತು ವಿಜ್ಞಾನ ವಿಷಯಗಳ ಉಪನ್ಯಾಸ ನಡೆಯಲಿದೆ.

ಸುಮಾರು 60 ಶಾಲೆಗಳ 500 ವಿದ್ಯಾಥಿರ್ಗಳು ಕಾರ್ಯಾಗಾರದಲ್ಲಿ ಭಾಗವಹಿಸುವ ನಿರೀೆ ಇದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net