ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮೌಲ್ಯಮಾಪನ ತಪ್ಪಿಸುವಂತಿಲ್ಲ

DK
Published on

ಮಂಗಳೂರು: ಪ್ರಸಕ್ತ ಸಾಲಿನ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ದ.ಕ ಜಿಲ್ಲೆಯ 6 ಮೌಲ್ಯಮಾಪನ ಕೇಂದ್ರಗಳಲ್ಲಿ ಅಕ್ಟೋಬರ್ 7ರಿಂದ ಪ್ರಾರಂಭವಾಗಲಿದೆ.

ಬೆಂಗಳೂರಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಆದೇಶ ಪಡೆದಿರುವ ಜಿಲ್ಲೆಯ ಎಲ್ಲಾ ಮೌಲ್ಯಮಾಪಕರು ಕಡ್ಡಾಯವಾಗಿ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗಬೇಕು. ಮೌಲ್ಯಮಾಪಕರಿಗೆ ಮಂಡಳಿ ಯಾವುದೇ ವಿನಾಯಿತಿಯನ್ನು ನೀಡಿರುವುದಿಲ್ಲ, ಗೈರು ಹಾಜರಾದಲ್ಲಿ ನಿಯಮಾನುಸಾರ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net