ಆರೋಗ್ಯಪೂರ್ಣ ಜೀವನಕ್ಕಾಗಿ ಕ್ರೀಡೆ : ಅರವಿಂದ ಅಯ್ಯಪ್ಪ ಸುತಗುಂಡಿ ಅಭಿಮತ

New Project (41)
Published on

ಸುಬ್ರಹ್ಮಣ್ಯ: ಆರೋಗ್ಯಪೂರ್ಣ ಜೀವನ ನಡೆಸಲು ಕ್ರೀಡೆ ಸಂಜೀವಿನಿ. ಶಾಲಾಮಟ್ಟದ ಕ್ರೀಡಾಕೂಟಗಳು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮತ್ತು ಎಸ್‌ಎಸ್‌ಪಿಯು ಕಾಲೇಜಿನ ಕಾರ್ಯದರ್ಶಿ ಅರವಿಂದ ಅಯ್ಯಪ್ಪ ಸುತಗುಂಡಿ ಹೇಳಿದರು.

ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಸೋಮಶೇಖರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮಾಧವ ಮೂಕಮಲೆ ಮುಖ್ಯಅತಿಥಿಗಳಾಗಿದ್ದರು. ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ನೀಲಪ್ಪ ಗೌಡ, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ನಂದಾ, ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್, ಅಧ್ಯಾಪಕ ಎಂ.ಕೃಷ್ಣ ಭಟ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ದೈಹಿಕ ಶಿಕ್ಷಣ ಶಿಕ್ಷಕಿ ಸ್ಮಿತಾ, ಕ್ರೀಡಾ ಸಂಯೋಜಕಿ ಜ್ಯೋತಿ ಪಿ.ರೈ, ಕ್ರೀಡಾ ಕಾರ್ಯದರ್ಶಿ ಹಿತೇಶ್ ಎಚ್.ಎಸ್. ಇದ್ದರು.

ಆಕರ್ಷಕ ಪಥಸಂಚಲನ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ವಿದ್ಯಾರ್ಥಿಗಳ ಬ್ಯಾಂಡ್ ವಾದನ ವಿಶೇಷ ಆಕರ್ಷಣೆಯಾಗಿತ್ತು. ಧ್ವಜಾರೋಹಣ ನಡೆದು ಕ್ರೀಡಾಳುಗಳು ತಂದ ಕ್ರೀಡಾಜ್ಯೋತಿ ಮೂಲಕ ಕ್ರೀಡಾಕೂಟವನ್ನು ಅರವಿಂದ ಅಯ್ಯಪ್ಪ ಸುತಗುಂಡಿ ಉದ್ಘಾಟಿಸಿದರು. ರಾಧಾಕೃಷ್ಣ ಚಿದ್ಗಲ್ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net