ಸಂತ ಮೇರಿ ಶಾಲಾ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ

07sunti02
ಸಂತ ಮೇರಿ ಶಾಲಾ ವಿದ್ಯಾರ್ಥಿಗಳ ಸಂಘವನ್ನು ಗಣ್ಯರು ಉದ್ಘಾಟಿಸಿದರು.
Published on

ಸುಂಟಿಕೊಪ್ಪ: ಇಲ್ಲಿನ ಸಂತ ಮೇರಿ ಶಾಲಾ ವಿದ್ಯಾರ್ಥಿಗಳ ಸಂಘದ ಉದ್ಘಾಟನಾ ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಉದ್ಯಮಿ ದೊಡ್ಡಮನೆ ವಿಶಾಲ್ ಶಿವಪ್ಪ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ಮತ್ತು ಬದುಕಿಗೆ ವಿದ್ಯಾಭ್ಯಾಸ ಮೂಲ ಆಧಾರ. ವಿದ್ಯಾಭ್ಯಾಸವು ಪಠ್ಯ ಮಾತ್ರವಲ್ಲದೆ, ಪಠ್ಯೇತರ ಚಟುವಟಿಕೆಯನ್ನೂ ಒಳಗೊಂಡಿದೆ. ಶಿಕ್ಷಣ ಅಥವಾ ಕ್ರೀಡಾ ಕ್ಷೇತ್ರದಲ್ಲಿ ಏಕಾಗ್ರತೆ, ಕಠಿಣ ಪರಿಶ್ರಮ ಅಗತ್ಯ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಮೇರಿ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ರೇ.ಫಾ.ವಿಜಯಕುಮಾರ್ ವಹಿಸಿದ್ದರು. ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಜೋವಿಟಾವಾಸ್, ಸಂತ ಮೇರಿ ಶಿಕ್ಷಣ ಸಂಸ್ಥೆಯ ಮುಖ್ಯಶಿಕ್ಷಕ ಸೆಲ್ವರಾಜ್ ಇತರರು ಇದ್ದರು.

ಕಾರ್ಯಕ್ರಮಮಕ್ಕೂ ಪಥಸಂಚಲನದ ಮೂಲಕ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net