ಬಿ.ಸಿ.ರೋಡಲ್ಲಿ ಯುವಕನಿಗೆ ಚೂರಿ ಇರಿತ

Stab
Published on

ಬಂಟ್ವಾಳ: ಅಜ್ಜಿಬೆಟ್ಟು ಕ್ರಾಸ್ ಬಳಿ ಬುಧವಾರ ಸಾಯಂಕಾಲ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಯುವಕನೊಬ್ಬನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

ವಳವೂರು ನಿವಾಸಿ ಮನೋಜ್ (30) ಚೂರಿ ಇರಿತಕ್ಕೊಳಗಾದ ಯುವಕ. ಮನೋಜ್ ತುಂಬೆಯಿಂದ ಬಿ.ಸಿ. ರೋಡು ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಹೆಲ್ಮೆಟ್ ಧರಿಸಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಅವರನ್ನು ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಇದನ್ನು ಗಮನಿಸಿದ ಮನೋಜ್ ಬಿ.ಸಿ.ರೋಡಿನ ಅಜ್ಜಿಬೆಟ್ಟು ತಿರುವು ಬಳಿ ಬೈಕ್ ತಿರುಗಿಸಿ ಅಂಗಡಿಯೊಂದರ ಮುಂಭಾಗ ನಿಲ್ಲಿಸಿದರು. ದುಷ್ಕರ್ಮಿಗಳು ಅಲ್ಲಿಗೆ ಆಗಮಿಸಿ ಚೂರಿಯಿಂದ ಇರಿದು ಬೈಕಿನಲ್ಲಿ ಪರಾರಿಯಾಗಿದ್ದಾರೆ.

ಗಾಯಾಳು ಮನೋಜ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರು ವಿದೇಶದಲ್ಲಿದ್ದು ಕೆಲ ದಿನಗಳ ಹಿಂದೆಯಷ್ಟೇ ಊರಿಗೆ ಮರಳಿದ್ದರು. ವೈಯುಕ್ತಿಕ ದ್ವೇಷ ಘಟನೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ವೆಲೈಂಟೀನ್ ಡಿಸೋಜ, ನಗರ ಠಾಣಾ ಇನ್‌ಸ್ಪೆಪೆಕ್ಟರ್ ಚೆಲುವರಾಜು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net