ಸುಳ್ಯ ಶಾಂತಿನಗರದ ಕ್ರೀಡಾಂಗಣ ತಡೆಗೋಡೆ ಕಾಮಗಾರಿ ಆರಂಭ

sullia
ಶಾಂತಿನಗರ ಕ್ರೀಡಾಂಗಣದಲ್ಲಿ ತಡೆಗೋಡೆ ನಿರ್ಮಾಣದ ಕಾಮಗಾರಿ ಆರಂಭಗೊಂಡಿದೆ.
Published on

ಸುಳ್ಯ: ಶಾಂತಿನಗರದ ತಾಲೂಕು ಕ್ರೀಡಾಂಗಣದ ಕೆಳಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದ್ದು, ಸ್ಥಳೀಯರ ಬೇಡಿಕೆಗೆ ಕೊನೆಗೂ ಫಲ ದೊರೆತಂತಾಗಿದೆ.

ಮಳೆಗಾಲದಲ್ಲಿ ಕ್ರೀಡಾಂಗಣದ ಕೆಳಭಾಗದಲ್ಲಿ ಹಾಕಲಾದ ಮಣ್ಣು ಜರಿದು, ಮಣ್ಣು ಮಿಶ್ರಿತ ನೀರು ಹರಿದು ಹೋಗುತ್ತಿತ್ತು. ಇದರಿಂದ ಕೆಳಭಾಗದಲ್ಲಿ ವಾಸಿಸುತ್ತಿದ್ದ ಕೆಲ ಕುಟುಂಬಗಳು ಆತಂಕದಲ್ಲೇ ಜೀವನ ನಡೆಸುವಂತಾಗಿತ್ತು. ಈ ಬಗ್ಗೆ ನಪಂ ಆಡಳಿತಕ್ಕೆ ದೂರು ನೀಡಲಾಗಿತ್ತಾದರೂ ಸಮಸ್ಯೆಗೆ ತಾತ್ಕಾಲಿಕ ಪರಿಹಾರವಷ್ಟೇ ಒದಗಿಸಲಾಗಿತ್ತು. ಕೆಲ ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದ ಶಾಸಕಿ ಭಾಗೀರಥಿ ಮುರುಳ್ಯ ಅವರು ಈ ಭಾಗದಲ್ಲಿ ಉಂಟಾಗಿದ್ದ ಸಮಸ್ಯೆ ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಗೆ ಆದಷ್ಟು ಶೀಘ್ರ ತಡೆಗೋಡೆ ನಿರ್ಮಿಸಲು ಸೂಚನೆ ನೀಡಿದ್ದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕೂಡಾ ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಅಹವಾಲು ಆಲಿಸಿದ್ದರು. ಇದೀಗ ಯುವಜನ ಕ್ರೀಡಾ ಇಲಾಖೆ ವತಿಯಿಂದ 10 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಲು ಮಂಜೂರಾಗಿದ್ದು, ಅದರ ಕಾಮಗಾರಿ ಆರಂಭಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net