ಮಾಜಿ ಮೇಯರ್ ನಾಪತ್ತೆಗೆ ಸಿಬ್ಬಂದಿ ಸಹಕಾರ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ರಮೇಶ್ ಆರೋಪ

04ank 02
Published on

ಆನೇಕಲ್: ಮಾಜಿ ಮೇಯರ್ ಸಂಪತ್ ರಾಜ್ ಪರಾರಿಯಾಗುವಲ್ಲಿ ಬ್ಯಾಪ್ಟಿಸ್ಟ್ ಆಸ್ಪತ್ರೆ ಆಡಳಿತ ಮಂಡಳಿ ಕೈವಾಡ ಇದೆ ಎಂದು ಬೆಂಗಳೂರು ದಕ್ಷಿಣ ಬಿಜಿಪಿ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್ ದೂರಿದರು.

ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪ್ರಕರಣದ ಆರೋಪಿಗಳಾದ ಮಾಜಿ ಮೇಯರ್ ಸಂಪತ್ ರಾಜ್, ಪಾಲಿಕೆ ಮಾಜಿ ಸದಸ್ಯ ಅಬ್ದುಲ್ ರಖೀಬ್ ಝಾಕೀರ್ ನಾಪತ್ತೆಯಾಗಿದ್ದಾರೆ. ನಾಪತ್ತೆ ಹಿಂದೆ ಆಸ್ಪತ್ರೆ ಸಿಬ್ಬಂದಿ ಕೈವಾಡ ಎದ್ದುಕಾಣುತ್ತಿದೆ. ಈ ಕೂಡಲೇ ಪೊಲೀಸರು, ಆಸ್ಪತ್ರೆ ಆಡಳಿತ ವರ್ಗದವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಬೇಕೆಂದು ಪೊಲೀಸ್ ಆಯುಕ್ತರಿಗೆ ಗುರುವಾರ ಮನವಿ ನೀಡಲಿದ್ದೇನೆ ಎಂದು ಹೆಬ್ಬಗೋಡಿ ನಗರಸಭೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆನೇಕಲ್ ತಾಲೂಕಿನ 2 ಪುರಸಭೆ ಹಾಗೂ 1 ನಗರಸಭೆಯಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಇನ್ನುಳಿದ ಪುರಸಭೆಯಲ್ಲಿ ಬಿಜೆಪಿ ಆಡಳಿತಕ್ಕೆ ಬರುವುದು ನಿಶ್ಚಿತ ಎಂದರು.

ಕೆಎ್ಡಿ ಹಾಗೂ ಪಿಎ್ಐ 2006 ರಿಂದ 2020ರ ವರೆಗೆ ಸುಮಾರು 18 ಹಿಂದು ಪರ ಕಾರ್ಯಕರ್ತರ ಕೊಲೆಗಳಲ್ಲಿ ಭಾಗಿಯಾಗಿರುವುದು ರುಜುವಾಗಿದೆ. ಈ ಹಿನ್ನೆಲೆಯಲ್ಲಿ ಸಂಘಟನೆ ನಿಷೇಧಕ್ಕೆ ಬೇಕಾದ ಸಾಕ್ಷ್ಯಾಧಾರವನ್ನು ಸರ್ಕಾರ ಸಂಗ್ರಹ ಮಾಡುತ್ತಿದೆ ಎಂದರು.

ಹೊರ ವರ್ತುಲ ರಸ್ತೆ ಪ್ರಾಧಿಕಾರದ ಅಧ್ಯಕ್ಷ ಸಿ.ಮುನಿರಾಜು ಮಾತನಾಡಿ, ಆನೇಕಲ್ ತಾಲೂಕು ಬಿಜೆಪಿ ಭದ್ರಕೋಟೆ. ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಮುಂದಿನ ಚುನಾವಣೆಗಳಲ್ಲಿ ಪಕ್ಷ ಬಲವರ್ಧನೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಹೆಬ್ಬಗೋಡಿ ನಗರಸಭೆ ಅಧ್ಯಕ್ಷೆ ನಂದಿನಿ,ಬಿಜೆಪಿ ಆನೇಕಲ್ ಮಂಡಲ ಅಧ್ಯಕ್ಷ ಎಸ್‌ಆರ್‌ಟಿ ಅಶೋಕ್, ಆನೇಕಲ್ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕೆ.ವಿ. ಶಿವಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ನಾಗೇಶ್ ರೆಡ್ಡಿ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net