ಸಿದ್ದು ಪ್ರಮಾಣವಚನ; ಒಂದು ದಿನ ಮೊದಲೇ ಆಗಮಿಸಿದ ಮೆಹಬೂಬಾ, ಸ್ಟಾಲಿನ್

Stalin Mufti
Published on

ಬೆಂಗಳೂರು: ಮೇ 20 ಶನಿವಾರದಂದು ಮಧ್ಯಾಹ್ನ 12.30ಕ್ಕೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಜ್ಯಗಳ ಗಣ್ಯರ ಪೈಕಿ ಕೆಲವರು ಒಂದು ದಿನ ಮೊದಲೇ ರಾಜ್ಯಕ್ಕೆ ಆಗಮಿಸಿದ್ದಾರೆ.

ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಶುಕ್ರವಾರ ಸಂಜೆಯೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರನ್ನು ಅವರ ಪಿಡಿಪಿ ಪಕ್ಷದ ಕಾರ್ಯಕರ್ತರು ಮತ್ತು ಕೆಲವು ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.

ಇದರ ಬೆನ್ನಲ್ಲೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರಿಗೆ ಅಭಿಮಾನಿಗಳು ಮತ್ತು ಡಿಎಂಕೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ದೊರೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net