ಬರ ಪರಿಹಾರ ಕಾಮಗಾರಿ ಆರಂಭಿಸಿ

02-11-Shiva-3
ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಮಹ್ಮದ್ ಅನ್ೀಗೆ ಲೋಕ ಜನಶಕ್ತಿ ಪಕ್ಷದಿಂದ ಗುರುವಾರ ಮನವಿ ಸಲ್ಲಿಸಲಾಯಿತು. ಪಕ್ಷದ ಕಿಸಾನ್ ವಿಭಾಗದ ರಾಜ್ಯಾಧ್ಯಕ್ಷ ಜಿ.ವೆಂಕಟರೆಡ್ಡಿ, ಜಿಲ್ಲಾಧ್ಯಕ್ಷ ಅಲ್ಲಪಾಡು ಗೋಪಾಲರೆಡ್ಡಿ, ಪದಾಕಾರಿಗಳಾದ ತಿಮ್ಮಪ್ಪ, ಜಿ.ಎಲ್.ರಂಗಪ್ಪ, ನಾರಾಯಣ ಕರ್ಲಿ, ಹಂಪಯ್ಯ, ಹುಚ್ಚರೆಡ್ಡಿ, ಉಮೇಶ ಇದ್ದರು.
Published on

ರಾಯಚೂರು: ಮುಂಗಾರು ಮಳೆ ವಿಲವಾಗಿ ರೈತರು ಸಂಕಷ್ವದಲ್ಲಿದ್ದು ಸರ್ಕಾರ ಕೂಡಲೇ ಬರ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳುವುದರ ಜತೆಗೆ ರೈತರಿಗೆ ಎಕರೆಗೆ 35 ಸಾವಿರ ರೂ. ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಲೋಕ ಜನಜಶಕ್ತಿ ಒತ್ತಾಯಿಸಿದೆ.
ಪಕ್ಷದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಮಹ್ಮದ್ ಅನ್ೀಗೆ ಗುರುವಾರ ಮನವಿ ಸಲ್ಲಿಸಿ, ಸರ್ಕಾರ ಕೇವಲ ಬರ ತಾಲೂಕು ಘೋಷಣೆ ಮಾಡಿ ಸುಮ್ಮನಾಗಿದ್ದು, ಯಾವುದೇ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಸಾಧ್ಯತೆಯಿದ್ದು, ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರ್ಮಿಕರಿಗೆ 200 ದಿನಗಳ ಕೆಲಸ ಒದಗಿಸಬೇಕು. ಕೂಲಿಯನ್ನು 600 ರೂ.ಗೆ ಹೆಚ್ಚಿಸಬೇಕು.
ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲು ಎನ್‌ಡಿಆರ್‌ಎ್ ಮಾನದಂಡವನ್ನು ಮಾರ್ಪಾಡು ಮಾಡಬೇಕು. ಅಂತರ್ಜಲ ವೃದ್ಧಿಗೆ ಕ್ರಮಕೈಗೊಳ್ಳಬೇಕು. ತುಂಗಭದ್ರಾ ಎಡದಂಡೆ ಕಾಲುವೆ ಕೊನೆಭಾಗಕ್ಕೆ ನೀರು ಹರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಪಕ್ಷದ ಕಿಸಾನ್ ವಿಭಾಗದ ರಾಜ್ಯಾಧ್ಯಕ್ಷ ಜಿ.ವೆಂಕಟರೆಡ್ಡಿ, ಜಿಲ್ಲಾಧ್ಯಕ್ಷ ಅಲ್ಲಪಾಡು ಗೋಪಾಲರೆಡ್ಡಿ, ಪದಾಕಾರಿಗಳಾದ ತಿಮ್ಮಪ್ಪ, ಜಿ.ಎಲ್.ರಂಗಪ್ಪ, ನಾರಾಯಣ ಕರ್ಲಿ, ಹಂಪಯ್ಯ, ಸೈಯದ್ ಅಶ್ರ್ ಪಾಶಾ, ಹುಚ್ಚರೆಡ್ಡಿ, ಉಮೇಶ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net