ಬೂದು ನೀರು ನಿರ್ವಹಣೆ ಕಾಮಗಾರಿ ಪ್ರಾರಂಭಿಸಿ

05 GJD1
ಗಜೇಂದ್ರಗಡ ತಾಲೂಕಿನ ಕುಂಟೋಜಿ ಪ್ರೌಢ ಶಾಲೆಗೆ ಇಒ ಡಾ. ಮೋಹನ ಡಿ. ಭೇಟಿ ನೀಡಿ ಆಟದ ಮೈದಾನ ಪರಿಶೀಲಿಸಿದರು,
Published on

ಗಜೇಂದ್ರಗಡ: ಕುಂಟೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರು ಹಳ್ಳಿಗಳಲ್ಲಿ ಬೂದು ನೀರು ನಿರ್ವಹಣೆ ಕಾಮಗಾರಿ ಶೀಘ್ರವೇ ಪ್ರಾರಂಭಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಮೋಹನ್ ಡಿ. ತಿಳಿಸಿದರು.

ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಗೆ ಶನಿವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಿ ಅವರು ಮಾತನಾಡಿದರು.
ಬೂದು ನೀರು ನಿರ್ವಹಣೆ ಕಾಮಗಾರಿಯ ಅಂದಾಜು ಪತ್ರಿಕೆ ತಯಾರಿಸಿ ತ್ವರಿತವಾಗಿ ಕಾಮಗಾರಿ ಪ್ರಾರಂಭಿಸಬೇಕು. ತಡ ಮಾಡಬಾರದು. ನಂತರ ಗ್ರಾಮ ಪಂಚಾಯಿತಿಯಲ್ಲಿನ ಕಡತಗಳನ್ನು ಪರಿಶೀಲಿಸಿದರು. ನಂತರ ಬೂದು ನೀರು ನಿರ್ವಹಣೆ ಕಾಮಗಾರಿಯ ಸ್ಥಳವನ್ನು ಪರಿಶೀಲಿಸಿದರು. ಬಳಿಕ ಗ್ರಂಥಾಲಯ ಕೇಂದ್ರಕ್ಕೆ ಭೇಟಿ ನೀಡಿ, ಗ್ರಂಥಾಲಯ ಅಭಿವೃದ್ಧಿಪಡಿಸುವಂತೆ ಪಿಡಿಒಗೆ ತಿಳಿಸಿದರು.

ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಬ್ಯಾಸ್ಕೆಟ್ ಬಾಲ್ ಮೈದಾನ, ಶೌಚಗೃಹ, ಅಡುಗೆ ಕೋಣೆ ವೀಕ್ಷಣೆ ಮಾಡಿದರು. ಮಕ್ಕಳ ಹಾಜರಾತಿ ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿದರು. ಮಕ್ಕಳ ಕಲಿಕಾ ಗುಣಮಟ್ಟದ ಮಾಹಿತಿ ಪಡೆದರು. ಶಾಲಾ ಮೈದಾನದಲ್ಲಿ ನರೇಗಾ ಯೋಜನೆಯಡಿ ಉದ್ಯಾನ ಬೆಳೆಸಲು ಸೂಚಿಸಿದರು. ಜೀಗೇರಿ ಗ್ರಾಮದಲ್ಲಿ ಸ್ಥಗಿತಗೊಂಡ ಶುದ್ಧ ಕುಡಿಯುವ ನೀರಿ ಘಟಕ ಪರಿಶೀಲಿಸಿದರು.

ಕುಂಟೋಜಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಿ ಶೌಚಗೃಹ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳ ಬಿಸಿಯೂಟ ಪರಿಶೀಲಿಸಿದರು. ಜೀಗೇರಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ ಪರಿಶೀಲಿಸಿದರು. ಪಿಡಿಒ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net