ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ

11ark1
Published on

ಅರಕಲಗೂಡು: ತಾಲೂಕಿನ ವಿವಿಧ ಗ್ರಾಮಗಳಲ್ಲಿ 55 ಲಕ್ಷ ರೂ. ವೆಚ್ಚದ ಸಿಮೆಂಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ತಿಳಿಸಿದರು.

ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಸೋಮವಾರ ಸಿಮೆಂಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯರ ನಿಧಿಯಲ್ಲಿ ಹಂಡ್ರಂಗಿ, ಕಣಿಯಾರು, ಕತ್ತಿಮಲ್ಲೇನಹಳ್ಳಿ ಗ್ರಾಪಂ ವ್ಯಾಪ್ತಿಯ ಮಾದಾಪುರ, ಕೆಲಗಳಲೆ, ಆಲದಹಳ್ಳಿ ಗ್ರಾಪಂ ವ್ಯಾಪ್ತಿಯ ಬಸವನಹಳ್ಳಿ, ಚಿಕ್ಕಗಾವನಹಳ್ಳಿ, ಹೆಬ್ಬಾಲೆ ಕೊಪ್ಪಲು ಗ್ರಾಮದಲ್ಲಿ ಜನರ ಅನುಕೂಲಕ್ಕೆ ಸಿಮೆಂಟ್ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದರು.

ಗಂಜಲಗೂಡು ಗ್ರಾಪಂ ಅಧ್ಯಕ್ಷ ರೂಪಕುಮಾರ್, ಉಪಾಧ್ಯಕ್ಷೆ ಉಮಾ ರಾಜೇಗೌಡ, ತಾಪಂ ಮಾಜಿ ಅಧ್ಯಕ್ಷ ಎಂ.ಎಸ್. ಯೋಗೇಶ್, ಜಿಪಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಓಬಯ್ಯ, ಸಹಾಯಕ ಇಂಜಿನಿಯರ್ ಧನಲಕ್ಷ್ಮೀ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net