

ಕಡೂರು: ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ರಾಗಿ ಖರೀದಿಸಲು ಕಡೂರು ಎಪಿಎಂಸಿ ಆವರಣದಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆೆ ಎಂದು ಖರೀದಿ ಕೇಂದ್ರದ ಅಧಿಕಾರಿ ಪ್ರಶಾಂತ್ ತಿಳಿಸಿದರು.
ಕಡೂರು ತಾಲೂಕಿನ ರೈತರಿಂದ ನೋಂದಣಿ ಕಾರ್ಯ ಪ್ರಗತಿಯಲ್ಲಿದ್ದು, ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್ ಉತ್ತಮಗುಣಮಟ್ಟದ ರಾಗಿ ಖರೀದಿಸಲಾಗುವುದು. ಡಿ.1ರಿಂದ ಬಯೋಮೆಟ್ರಿಕ್ ಮೂಲಕ ನೋಂದಣಿ ಕಾರ್ಯ ನಡೆಯುತ್ತಿದೆ ಪ್ರತಿ ಕ್ವಿಂಟಾಲ್ ರಾಗಿಗೆ 4,290 ರೂ.ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. 2025ರ ಮಾ.31ಕ್ಕೆ ಖರೀದಿ ಪ್ರಕ್ರಿಯೆ ಮುಕ್ತಾಯವಾಗಲಿದೆ. ಹೆಚ್ಚಿನ ಮಾಹಿತಿಗೆ ಖರೀದಿ ಕೇಂದ್ರದ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹು ಎಂದರು.