

ವಿಜಯವಾಣಿ ಸುದ್ದಿಜಾಲ ಧಾರವಾಡ
ಕ್ರೀಡಾ ದಿನಾಚರಣೆ ಅಂಗವಾಗಿ ಜಿಲ್ಲಾ ಒಲಿಂಪಿಕ್ ಅಸೋಸಿಯೇಷನ್ ಹಾಗೂ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಆ. 25ರಂದು ನಗರದಲ್ಲಿ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಓಟ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಶಿವು ಹೀರೆಮಠ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಆರ್.ಎನ್. ಶೆಟ್ಟಿ ಕ್ರೀಡಾಗಂಣದಲ್ಲಿ ಬೆಳಗ್ಗೆ 7 ಗಂಟೆಗೆ ಕ್ರೀಡಾಪಟು ಹಾಗೂ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ರವೀಂದ್ರ ಕುರುಬಗಟ್ಟಿ ಮತ್ತು ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ಓಟಕ್ಕೆ ಚಾಲನೆ ನೀಡುವರು. ಪಾಲಿಕೆ ಪ್ರತಿಪಕ್ಷ ನಾಯಕ ರಾಜಶೇಖರ ಕಮತಿ, ಅಸೋಸಿಯೇಷನ್ ಗೌರವ ಅಧ್ಯಕ್ಷ ಆನಂದ ನಾಡಗೀರ, ವಿಲಾಸ ನೀಲಗುಂದ ಪಾಲ್ಗೊಳ್ಳುವರು. 9.30ಕ್ಕೆ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ, ಮೇಯರ್ ರಾಮಪ್ಪ ಬಡಿಗೇರ, ಮಾಜಿ ಶಾಸಕ ಅಮೃತ ದೇಸಾಯಿ, ಕೆಎಂಎಫ್ ಅಧ್ಯಕ್ಷ ಶಂಕರ ಮುಗದ, ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ, ಎಐಸಿಸಿ ಸದಸ್ಯ ದೀಪಕ ಚಿಂಚೋರೆ, ವಕೀಲ ಪಿ.ಎಚ್. ನೀರಲಕೇರಿ ಬಹುಮಾನ ವಿತರಿಸುವರು ಎಂದರು.
ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಬಿ.ಎಸ್. ತಾಳಿಕೋಟಿ ಮಾತನಾಡಿ, ರಾಷ್ಟç ಮಟ್ಟದ ಓಟಗಾರ್ತಿ ದಿ. ಕಲ್ಲವ್ವ ಸಿಂಧೋಗಿ ಹಾಗೂ ಭಾರತೀಯ ಕ್ರೀಡಾ ಪ್ರಾಽಕಾರದ ಅಧಿಕಾರಿ ದಿ. ಎಸ್.ಎಸ್. ಅಗಡಿ ಸ್ಮರಣಾರ್ಥ ರಾಜ್ಯ ಮಟ್ಟದ 10 ಕಿ.ಮೀ. ಓಟದಲ್ಲಿ ಪುರುಷ ಹಾಗೂ ಮಹಿಳೆಯರು ಭಾಗವಹಿಸಬಹುದು. ಜಿಲ್ಲಾ ಮಟ್ಟದ 4 ಕಿ.ಮೀ. ಓಟದಲ್ಲಿ 16 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರು ಪಾಲ್ಗೊಳ್ಳಬಹುದು. ಎರಡೂ ವಿಭಾಗಗಳಲ್ಲಿ ಟಾಪ್ 6 ಸ್ಪಽðಗಳಿಗೆ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು ಎಂದರು.
ಕೆ.ಎಸ್. ಭೀಮಣ್ಣವರ, ಆರ್.ಕೆ. ಪಡತಾರೆ, ಜಿ.ಎಸ್. ಜಾಧವ ಸುದ್ದಿಗೋಷ್ಠಿಯಲ್ಲಿದ್ದರು.