ಶಿಕ್ಷಕ ಹೆಚ್.ಕೆ. ಕುಮಾರ್ ಅವರಿಗೆ ರಾಜ್ಯ ಪ್ರಶಸ್ತಿ

state award
Published on

ಮಡಿಕೇರಿ:

ಗೋಣಿಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ ಕುಮಾರ್ ಉತ್ತಮ ಶಿಕ್ಷಕರ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಗೋಣಿಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಶಾಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿ, ಮಕ್ಕಳ ಶಿಕ್ಷಣದ ಉನ್ನತೀಕರಣಕ್ಕೆ ಶ್ರಮಿಸುತ್ತಿದ್ದಾರೆ.

ಕಳೆದ ಬಾರಿ ನಡೆದ ಶತಮಾನೋತ್ಸವ ಸಂಭ್ರಮವನ್ನು ಅತ್ಯುತ್ತಮವಾಗಿ ಆಯೋಜಿಸುವ ಮೂಲಕ ರಾಜ್ಯಮಟ್ಟದಲ್ಲಿ ಗಮನ ಸೆಳೆದಿದ್ದರು. ಶಾಲೆಯಲ್ಲಿ ಸಮಸ್ಯೆಯಾಗಿ ಕಾಡುತ್ತಿದ್ದ ಕುಡಿಯುವ ನೀರು, ಶುಚಿತ್ವ, ಕೊಠಡಿಗಳ ನವೀಕರಣ ಸರಿದಂತೆ ಹಲವಾರು ಕಾರ್ಯೋ ಯೋಜನೆಗಳನ್ನ ರೂಪಿಸುವ ಮೂಲಕ ಸರ್ಕಾರಿ ಶಾಲೆಯ ಮಕ್ಕಳ ಓದಿಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಕುಮಾರ್ ಬಹುಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ.

ಕುಶಾಲನಗರ ತಾಲೂಕು ವಾಲ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲೂ ಇವರ ಸೇವೆ ಗಮನ ಸೆಳೆದಿತ್ತು. ಕುಮಾರ್ ಅವರು ಕುಶಾಲನಗರದ ನಿವಾಸಿಯಾಗಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net