ಡಾ.ಎನ್.ಎಸ್.ರಾಮೇಗೌಡ, ವಿ.ಆರ್.ಶೈಲಜಾಗೆ ರಾಜ್ಯಮಟ್ಟದ ಪ್ರಶಸ್ತಿ: ಸೆ.1ರಂದು ನಗರದಲ್ಲಿ ಪ್ರದಾನ ಸಮಾರಂಭ

State Award Ceremony Press Conference Mandya
Published on

ಮಂಡ್ಯ: ಕರ್ನಾಟಕ ಸಂಘ, ಸಾಂಸ್ಕೃತಿಕ ಟ್ರಸ್ಟ್ ಸಹಯೋಗದಲ್ಲಿ ಕೊಡಮಾಡುವ 27ನೇ ವರ್ಷದ ದೇವಮ್ಮ ಇಂಡುವಾಳು ಎಚ್.ಹೊನ್ನಯ್ಯ ಮತ್ತು ಇಂಡುವಾಳು ಎಚ್.ಹೊನ್ನಯ್ಯ ರಾಜ್ಯಮಟ್ಟದ ಸಮಾಜ ಸೇವಾ ಪ್ರಶಸ್ತಿಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎನ್.ಎಸ್.ರಾಮೇಗೌಡ ಮತ್ತು ಮೈಸೂರು ವಿವಿಯ ಕುಲಸಚಿವೆ ವಿ.ಆರ್.ಶೈಲಜಾ ಆಯ್ಕೆಯಾಗಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ಸೆ.1ರಂದು ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಇಬ್ಬರಿಗೂ ತಲಾ 25 ಸಾವಿರ ರೂ ನಗದಿನ ಜತೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಅಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಿರುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಯೂ ಆದ ಸಂಸದ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಇಂಡುವಾಳು ಎಚ್.ಹೊನ್ನಯ್ಯ ಅವರ ಮಗ ಡಾ.ಎಚ್.ಸಿದ್ದಪ್ಪ ಭಾಗವಹಿಸಲಿದ್ದಾರೆ. ಇದೇ ವೇಳೆ ನಾಲ್ವರು ವಿದ್ಯಾರ್ಥಿಗಳಿಗೆ ಎಚ್.ಶಾರದಮ್ಮ ಮತ್ತು ಕೆಂಪಯ್ಯ ವಿದ್ಯಾರ್ಥಿ ಪುರಸ್ಕಾರ ನೀಡಲಾಗುವುದು ಎಂದು ವಿವರಿಸಿದರು.
ಕರ್ನಾಟಕ ಸಂಘದ ಕಾರ್ಯದರ್ಶಿ ಎಚ್.ಡಿ.ಸೋಮಶೇಖರ್, ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಕೆ.ಜಯರಾಂ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net