

ಹುಬ್ಬಳ್ಳಿ: ಕರ್ನಾಟಕ ಸರ್ಕಾರ ವತಿಯಿಂದ ಇತ್ತೀಚೆಗೆ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಹುಬ್ಬಳ್ಳಿಯ ಮಜೇಥಿಯಾ ಫೌಂಡೇಷನ್ ಚೇರ್ಮನ್ ಜಿತೇಂದ್ರ ಮಜೇಥಿಯಾ ಅವರಿಗೆ ಸಮಾಜ ಸೇವಾ ವಿಭಾಗದಡಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.