

ಕಾಸರಗೋಡು: ಜಿಲ್ಲೆಯಲ್ಲಿ ಡಿಜಿಟಲ್ ಸಮೀಕ್ಷೆ ಚಟುವಟಿಕೆಗಳಿಗಾಗಿ ಕಾಸರಗೋಡು ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಅವರನ್ನು ಅತ್ಯುತ್ತಮ ಜಿಲ್ಲಾಧಿಕಾರಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಮನ್ವಯತೆ ಹಾಗೂ ಉತ್ತಮ ಸಂಘಟನೆಗಾಗಿ ಈ ಪ್ರಶಸ್ತಿ ಲಭಿಸಿದೆ ಎಂದು ಕಂದಾಯ ಸರ್ವೇ ಮತ್ತು ಭೂಸಾರಿಗೆ ಇಲಾಖೆ ಸಚಿವ ಕೆ.ರಾಜನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಡಿಜಿಟಲ್ ಸಮೀಕ್ಷೆ ಚಟುವಟಿಕೆಗಳನ್ನು ಉತ್ತಮವಾಗಿ ಆಯೋಜಿಸಲು ಜಿಲ್ಲಾಧಿಕಾರಿ ರಾಜ್ಯದಲ್ಲಿ ಗ್ರಾಮಮಟ್ಟದಲ್ಲಿ ವಿಶೇಷ ಅದಾಲತ್ ಆಯೋಜಿಸಿರುವುದಲ್ಲದೆ, ಇದೇ ಮೊದಲ ಬಾರಿಗೆ ಡಿಜಿಟಲ್ ಸಮೀಕ್ಷೆ ಪೂರ್ಣಗೊಂಡಿರುವ ಕುಂಬಳೆ ಪಂಚಾಯಿತಿಯ ಉಜಾರ್ ಉಳುವಾರ್ ಹಾಗೂ ತಳಂಗರ ಸೇರಿದಂತೆ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಖುದ್ದು ಭೇಟಿ ನೀಡಿ ಅದಾಲತ್ ನಡೆಸುವ ಮೂಲಕ ಗಮನ ಸೆಳೆದಿದ್ದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ನೇತೃತ್ವದಲ್ಲಿ ನಡೆಸಲಾದ ಐಲೀಡ್ ಯೋಜನೆಗೆ ಈ ಬಾರಿಯ ಸಾಮಾಜಿಕ ನ್ಯಾಯ ಇಲಾಖೆ ವತಿಯಿಂದ ಮುಖ್ಯ ಚುನಾವಣಾಧಿಕಾರಿಗಳ ಉತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪಡೆದುಕೊಂಡಿದ್ದರು.