ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕಿ ಭಾಗ್ಯವತಿಗೆ ಸನ್ಮಾನ

13.npk-1
Published on

ನಾಪೋಕ್ಲು: ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕಿ ಪ್ರಶಸ್ತಿ ಪಡೆದ ಹಳೇ ತಾಲೂಕಿನ ಅಂಗನವಾಡಿ ಶಿಕ್ಷಕಿಯಾದ ಪೊರುಕುವಂಡ ಭಾಗ್ಯವತಿ ಅವರನ್ನು ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಸನ್ಮಾನಿಸಿ ಶುಭ ಹಾರೈಸಿದರು.

ನಾಪೋಕ್ಲು ಭಾಗಕ್ಕೆ ಭೇಟಿ ನೀಡಿದ ಶಾಸಕರು, ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕಿಯನ್ನು ಸನ್ಮಾನಿಸಿ, ತಮ್ಮ ವೃತ್ತಿಯಲ್ಲಿ ಮತ್ತಷ್ಟು ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಭಾಗ್ಯವತಿ ಅವರಿಗೆ ಇತ್ತೀಚೆಗೆ ರಾಜ್ಯ ಸರ್ಕಾರದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ನಾಪೋಕ್ಲು ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಕೆಡಿಪಿ ಸದಸ್ಯರಾದ ಎಂ.ಎಚ್.ಅಬ್ದುಲ್ ರೆಹಮಾನ್, ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಹೇಮಾ ಅರುಣ್ ಹಾಗೂ ನಾಯಕಂಡ ಮುತ್ತಪ್ಪ, ಅಪ್ಪಚೆಟ್ಟೋಳಂಡ ಮಿಥುನ್ ಮಾಚಯ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net