ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಶೇ.30 ಅನುದಾನ ಮೀಸಲಿಡಿ; ಎಸ್‌ಎಫ್‌ಐ ಒತ್ತಾಯ

020320 Raichur SFI Students appeal
Published on

ರಾಯಚೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಬಜೆಟ್‌ನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಜಿಪಂ ಕಚೇರಿಯ ಆವರಣದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಅಧಿಕಾರಿ ಬಸವರಾಜ ಅವರ ಮೂಲಕ ಸಚಿವರಿಗೆ ಮನವಿ ಸಲ್ಲಿಸಿದರು. ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.30 ಹಣ ಮೀಸಲಿಡಬೇಕು, 2019-20ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡಬೇಕು, ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆಯನ್ನು ಕನಿಷ್ಠ 3500 ರೂ.ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಪಾಧ್ಯಕ್ಷೆ ದಿಲ್ಷಾದ್, ಸಹ ಕಾರ್ಯದರ್ಶಿ ಗೌರಿ, ಹನುಮೇಶ ನಾಯಕ, ಜಿಲ್ಲಾ ಸಮಿತಿ ಸದಸ್ಯರಾದ ಮಹೇಶ್ವರಿ, ಕಾಸಿಂಬೀ, ಲಿಂಗರಾಜ್, ವಿದ್ಯಾರ್ಥಿಗಳಾದ ಸ್ವಾತಿ, ರಾಜೇಶ್ವರಿ, ಪವಿತ್ರಾ, ಶೈಲಜಾ, ಉಮಾ, ನಾಗವೇಣಿ, ಸುನಿತಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net