ರಾಜ್ಯ ಬಜೆಟ್​ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?

Bengaluru
Published on

ಬೆಂಗಳೂರೂ: 2021-22ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಒಟ್ಟು 7795 ಕೋಟಿ ರೂ. ಅನುದಾನವನ್ನು ಸರ್ಕಾರ ಮೀಸಲಿಟ್ಟಿದ್ದು, ಸಂಪೂರ್ಣ ವಿವರಣೆ ಈ ಕೆಳಕಂಡಂತಿದೆ.

  • ಬೆಂಗಳೂರಿನ ಮಲ್ಲೇಶ್ವರದಲ್ಲಿ ಮೈಸೂರು ಲ್ಯಾಂಪ್ಸ್ ವಕ್ರ್ಸ್ ನಿಯಮಿತಕ್ಕೆ ಸೇರಿದ ಪ್ರದೇಶದಲ್ಲಿ Experience Bengaluru ಕೇಂದ್ರ ಅಭಿವೃದ್ಧಿ.
  • ಬೈಯ್ಯಪ್ಪನಹಳ್ಳಿಯಲ್ಲಿರುವ ಎನ್.ಜಿ.ಇ.ಎಫ್.ನಲ್ಲಿ ಹಾಗೂ ಇನ್ನೂ ಮೂರು ಕಡೆಗಳಲ್ಲಿ ವೃಕ್ಷೋದ್ಯಾನಗಳ ಅಭಿವೃದ್ಧಿ ಮಾಡುವುದು. ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳುವುದು. 14,788 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 58.2 ಕಿ.ಮೀ. ಉದ್ದದ ಹೊರ ವರ್ತುಲ ರಸ್ತೆ-ಏರ್ಪೋಟ್​ ಮೆಟ್ರೋ ಜಾಲ ಹಂತ 2ಎ ಮತ್ತು 2ಬಿ ಅನುಷ್ಠಾನಗೊಳಿಸುವುದು.
  • ಉಪನಗರ ರೈಲು ಯೋಜನೆಗೆ 2021-22ನೇ ಸಾಲಿಗೆ 850 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಕಟ್ಟಡ ನಿರ್ಮಾಣ ಶೀಘ್ರ ಪೂರ್ಣಗೊಳಿಸಿ, ಗರಿಷ್ಠ ವಾರ್ಷಿಕ ಪ್ರಯಾಣಿಕರ ಸಾಮರ್ಥ್ಯ 60 ದಶಲಕ್ಷಕ್ಕೆ ಹೆಚ್ಚಳ ಮಾಡಲಾಗುವುದು.
  • ಕೋರಮಂಗಲ ಕಣಿವೆಯನ್ನು ಪ್ರವಾಸಿ ಆಕರ್ಷಣೆಯಾಗಿ ಅಭಿವೃದ್ಧಿ ಪಡಿಸುವ 169 ಕೋಟಿ ರೂ. ವೆಚ್ಚದಲ್ಲಿ ಕೋರಮಂಗಲ ಕಣಿವೆ ರಾಜಕಾಲುವೆ ಅಭಿವೃದ್ಧಿ ಮತ್ತು ನಿರ್ವಹಣೆ (ಕೆ-100) ಯೋಜನೆ ಅನುಷ್ಠಾನಗೊಳಿಸಲಾಗುವುದು.
  • ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತಾರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಅಭಿವೃದ್ಧಿ ಮಾಡಲಾಗುವುದು. ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಬಿಬಿಎಂಪಿ ಸಹಯೋಗದೊಂದಿಗೆ 450 ಕೋಟಿ ವೆಚ್ಚದಲ್ಲಿ ಕೆ.ಸಿ. ವ್ಯಾಲಿ ಆವರಣದ 248 ಎಂ.ಎಲ್.ಡಿ ಸಾಮರ್ಥ್ಯದ ಎಸ್.ಟಿ.ಪಿ. ಪುನರುಜ್ಜೀವನ ಮತ್ತು ಉನ್ನತೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು.
  • 6. ಆಗಸ್ಟ್ 2021 ರೊಳಗೆ “ಒಂದು ರಾಷ್ಟ್ರ ಒಂದು ಕಾರ್ಡ್” ವ್ಯವಸ್ಥೆ ಜಾರಿಗೆ ಕ್ರಮ ಮತ್ತು ಅದನ್ನು ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಈ ಕಾರ್ಡ್ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು.
  • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ Automatic Fare Collection System ಯೋಜನೆ ಅನುಷ್ಠಾನ ಮತ್ತು ಬೆಂಗಳೂರು ನಗರದ ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪನಿ ಸ್ಥಾಪನೆ ಮಾಡಲಾಗುವುದು.
  • ಉತ್ತರ ಬೆಂಗಳೂರಿನಲ್ಲಿ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ ಮತ್ತು 28 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಹಾಗೂ ಆರ್ಗನ್ ಟ್ರಾನ್ಸ್‍ಪ್ಲಾಂಟ್ ಸಂಸ್ಥೆ ಪ್ರಸಕ್ತ ಸಾಲಿನಲ್ಲಿ ಕಾರ್ಯಾರಂಭ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು.
  • 33 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲೆಗಳ ನವೀಕರಣ ಮತ್ತು ಪುನರ್ ನಿರ್ಮಾಣ ಮತ್ತು ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಪ್ರತಿ ವಾರಾಂತ್ಯದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು 2 ಕೋಟಿ ರೂ. ಮೀಸಲಿಡಲಾಗುವುದು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net