5ರಂದು ರಾಜ್ಯ ಗುತ್ತಿಗೆದಾರರ ಸಮ್ಮೇಳನ

guttigedara kemppanna
Published on

ಮೈಸೂರು: ಬೆಂಗಳೂರಿನ ಅರಮನೆ ಆವರಣದಲ್ಲಿ ಮಾ.5ರಂದು ರಾಜ್ಯ ಗುತ್ತಿಗೆದಾರರ ಸಮ್ಮೇಳನ ಆಯೋಜಿಸಲಾಗಿದ್ದು, ಸುಮಾರು 10 ಸಾವಿರ ಗುತ್ತಿಗೆದಾರರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಉಪಾಧ್ಯಕ್ಷ ಸಿ.ಡಿ.ಕೃಷ್ಣ ತಿಳಿಸಿದರು.

ಅಂದು ಬೆಳಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅಧ್ಯಕ್ಷತೆ ವಹಿಸುವರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್, ಪ್ರಿಯಾಂಕ್ ಖರ್ಗೆ, ಎಸ್.ಟಿ.ಬೋಸರಾಜು ಭಾಗವಹಿಸಲಿದ್ದಾರೆ. ಇದೇ ವೇಳೆ ಗುತ್ತಿಗೆದಾರರಿಗೆ ನೆರವಾಗುವ ರೀತಿಯಲ್ಲಿ ತಾಂತ್ರಿಕ ಅಧಿವೇಶನಗಳು ನಡೆಯಲಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪದಾಧಿಕಾರಿಗಳಾದ ಎ.ಜಿ.ಸುರೇಶ್, ಕೆ.ರವಿ, ಜಿ.ಅಶೋಕ್, ಮಹದೇವಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net