ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉದಯ್‌ ಎರಡನೇ ಸ್ಥಾನ: ಬಹುಮಾನ ವಿತರಿಸಿದ ಸಿಎಂ ಸಿದ್ದರಾಮಯ್ಯ

State Essay Competition mandya
Published on

ಮಂಡ್ಯ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ಅವರ 154 ನೇ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ ಕುರಿತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಪದವಿ ಪೂರ್ವ ವಿಭಾಗದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ (ಮಾಜಿ ಪುರಸಭೆ) ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಎಂ.ಎಸ್.ಉದಯ್‌ಕುಮಾರ್ ದ್ವಿತೀಯ ಬಹುಮಾನ ಪಡೆದಿದ್ದಾರೆ.

ಮಂಗಳವಾರ ಬೆಂಗಳೂರಿನ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗೆ 21 ಸಾವಿರ ರೂ ನಗದು ಹಾಗೂ ಪಾರಿತೋಷಕ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಡೊಳ್ಳಿನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net