ಜನರು ನೆನೆಯುವ ರೀತಿ ಕೆಲಸ ನಿರ್ವಹಿಸಿ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಸಲಹೆ

State Food Commission meeting mandya
Published on

ಮಂಡ್ಯ: ಸರ್ಕಾರಿ ಇಲಾಖೆಯಲ್ಲಿ ಸೇವೆ ಮಾಡಲು ಅವಕಾಶ ಸಿಗುವುದು ಕೆಲವರಿಗೆ ಮಾತ್ರ. ಆದ್ದರಿಂದ ಅಧಿಕಾರಿಗಳು ಜನರು ನೆನೆಯುವ ರೀತಿ ಕೆಲಸ ನಿರ್ವಹಿಸಿ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಸಲಹೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಜೀವನದಲ್ಲಿ ಹಣವು ಅಗತ್ಯ. ಆದರೆ ನ್ಯಾಯಯುತವಾಗಿ ದುಡಿದು ಸಂಪಾದಿಸಬೇಕು. ಯಾವುದೇ ಅಧಿಕಾರಿಗಳು ಹಣದ ದೃಷ್ಟಿಯಿಂದ ಕೆಲಸ ಮಾಡದೆ, ಸಾರ್ವಜನಿಕರ ಹಿತದೃಷ್ಟಿಯಿಂದ ಸೇವೆ ಮಾಡಿ. ಸತತ ಪ್ರಯತ್ನ ಹಾಗೂ ಪ್ರಾಮಾಣಿಕ ಕೆಲಸಗಳಿಂದ ಯಶಸ್ಸು ದೊರೆಯುತ್ತದೆ ಎಂದರು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ-2013 ದೇಶದ ಎಲ್ಲ ರಾಜ್ಯದಲ್ಲೂ ಜಾರಿಯಾಗಿದೆ. ಜಾರ್ಖಂಡ್, ಪಂಜಾಬ್, ಆಂಧ್ರಪ್ರದೇಶದಲ್ಲಿ ಶೇ.100ರಷ್ಟು ಹಾಗೂ ಕರ್ನಾಟಕದಲ್ಲಿ ಶೇ.90ರಷ್ಟು ಜಾರಿಯಲ್ಲಿದೆ. ಆದ್ದರಿಂದ ನಮ್ಮ ರಾಜ್ಯದಲ್ಲೂ ಶೇ.100ರಷ್ಟು ಜಾರಿಯಾಗಲು ಪ್ರತಿಯೊಬ್ಬರ ಸಹಕಾರವು ಮುಖ್ಯವಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಆಯೋಗದ ತಂಡ ಪ್ರವಾಸ ನಡೆಸಿ ವರದಿ ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡು ಅನುಪಾಲನಾ ವರದಿಯನ್ನು ಆಯೋಗಕ್ಕೆ ನೀಡಬೇಕು. ಕೆಳಹಂತದ ಅಧಿಕಾರಿ, ನೌಕರರಿಗೆ ಸರಿಯಾದ ನಿರ್ದೇಶನ ನೀಡುವ ಮೂಲಕ ಉತ್ತಮ ಕೆಲಸ ಮಾಡುವಂತೆ ಸೂಚಿಸಬೇಕು. ಪ್ರತಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಆಹಾರ ನೀಡುವುದು ಎಷ್ಟು ಮುಖ್ಯವೋ, ಮೂಲ ಸೌಕರ್ಯ ನೀಡಿ ಉತ್ತಮ ವಾತಾವರಣ ಕಲ್ಪಿಸುವುದು ಕೂಡ ಅಷ್ಟೇ ಮುಖ್ಯವಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net