ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ

Untitled design (3)
ಕಿಸಾನ್ ಸಮ್ಮಾನ್,ರೈತ ವಿದ್ಯಾನಿಧಿ, ಭೂಸಿರಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಸದಸ್ಯರು ಗಂಗಾವತಿಯ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಇತರರಿದ್ದರು.
Published on

ಗಂಗಾವತಿ: ಕಿಸಾನ್ ಸಮ್ಮಾನ್,ರೈತ ವಿದ್ಯಾನಿಧಿ, ಭೂಸಿರಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಸದಸ್ಯರು ಶಿರಸ್ತೇದಾರ ರವಿಕುಮಾರ ನಾಯಕ್ವಾಡಿಗೆ ಶುಕ್ರವಾರ ಮನವಿ ಸಲ್ಲಿಸಿದರು


ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ರಾಜ್ಯ ಸರ್ಕಾರ ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ರೈತ ಪರ ಯೋಜನೆಗಳನ್ನು ರದ್ದುಗೊಳಿಸಿದೆ. ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ರೈತ ಸಂಪದ, ಭೂಸಿರಿ, ಜಿಲ್ಲೆಗೊಂದು ಗೋಶಾಲೆ ಯೋಜನೆ ಕೈಬಿಟ್ಟಿರುವುದು ಪ್ರತಿಕಾರದ ರಾಜಕಾರಣವಾಗಿದೆ.

ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರದ್ದುಗೊಳಿಸಲು ನಿರ್ಧರಿಸಿದ್ದು ಸರಿಯಲ್ಲ. ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಲವಾಗಿದ್ದು, ಅನಿಯಮಿತ ಲೋಡ್ ಶೆಡ್ಡಿಂಗ್‌ನಿಂದ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ. ಆದ್ದರಿಂದ ರೈತ ಪರ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.


ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಮಾತನಾಡಿ, ಬಹುತೇಕ ಜಿಲ್ಲೆಗಳಲ್ಲಿ ಬರಗಾಲ ಆವರಿಸಿಕೊಂಡಿದ್ದು, ಪರಿಹಾರ ಕ್ರಮಕ್ಕೆ ಮುಂದಾಗಬೇಕಿದ್ದ ರಾಜ್ಯ ಸರ್ಕಾರ ರೈತ ಯೋಜನೆಗಳನ್ನು ರದ್ದುಗೊಳಿಸುತ್ತಿದೆ. ರೈತರಿಗೆ ಅಗತ್ಯವಿರುವ ರಸಗೊಬ್ಬರ, ನಿರಂತರ ವಿದ್ಯುತ್ ಪೂರೈಕೆ ಅನುಷ್ಟಾನಗೊಳಿಸಬೇಕು ಎಂದರು.


ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ, ಜಿಪಂ ಮಾಜಿ ಸದಸ್ಯ ಎಚ್.ಎಂ.ಸಿದ್ರಾಮಯ್ಯಸ್ವಾಮಿ, ನಯೋಪ್ರಾ ಮಾಜಿ ಅಧ್ಯಕ್ಷರಾದ ಎಸ್.ರಾಘವೇಂದ್ರ ಶ್ರೇಷ್ಟಿ, ಮಹಾಲಿಂಗಪ್ಪ ಬನ್ನಿಕೊಪ್ಪ, ನಗರಸಭೆ ಸದಸ್ಯರಾದ ವಾಸುದೇವ ನವಲಿ, ನೀಲಕಂಠಪ್ಪ ಕಟ್ಟಿಮನಿ,

ಉಮೇಶ ಸಿಂಗನಾಳ್, ನವೀನ್ ಮಾಲಿ ಪಾಟೀಲ್, ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪ, ಮಾಜಿ ಸದಸ್ಯ ವೀರಭದ್ರಪ್ಪ ನಾಯಕ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲಂಕೇಶ ಗುಳದಾಳ್, ತಾಲೂಕಾಧ್ಯಕ್ಷ ಶಿವಪ್ಪ ಹತ್ತಿಮರದ, ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಗಿ, ನಗರ ಮಂಡಲ ಅಧ್ಯಕ್ಷ ಕಾಶೀನಾಥ ಚಿತ್ರಗಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net