ಹೊರಗೊಂದು-ಒಳಗೊಂದು ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರ: ರಾಘವೇಂದ್ರ ಕಿಡಿ

b y raghavendra
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ
Published on

ಶಿವಮೊಗ್ಗ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಹೊರಗೊಂದು-ಒಳಗೊಂದು ನೀತಿ ಅನುಸರಿಸುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಕಿಡಿಕಾರಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಲೋಕಸಭಾ ಸದಸ್ಯರ ಸಭೆ ಕರೆದಾಗ ಒಳಗಡೆ ಎಲ್ಲರ ಸಹಕಾರ ಇದೆ ಎಂದು ಹೇಳಿದ್ದರು. ಆದರೆ ಹೊರಗಡೆ ಬರುತ್ತಿದಂತೆ ರಾಜ್ಯದ ಸಂಸತ್ ಸದಸ್ಯರು ಸಹಕಾರ ನೀಡುತ್ತಿಲ್ಲ ಎಂದು ಆರೋಪ ಮಾಡಿದ್ದರು ಎಂದು ಬೇಸರ ವ್ಯಕ್ತಪಡಿಸಿದರು.
ಈ ವಿಚಾರದಲ್ಲಿ ರಾಜಕಾರಣ ಮಾಡುವುದಕ್ಕೆ ಬಯಸುವುದಿಲ್ಲ. ಆದರೆ ರಾಜ್ಯದ ಜನರ ಹಿತಾಸಕ್ತಿ ಕಾಯಬೇಕಿದ್ದ ಸರ್ಕಾರ ಕಾವೇರಿ ನ್ಯಾಯಾಧಿಕರಣದ ಎದುರು ಸಮರ್ಥವಾಗಿ ವಾದ ಮಂಡಿಸಲು ವಿಫಲವಾಗಿದೆ. ಬೆಂಗಳೂರಿಗೆ ಕುಡಿಯುವ ನೀರು ಸೇರಿದಂತೆ ಒಟ್ಟಾರೆ 110 ಟಿಎಂಸಿ ನೀರಿನ ಅಗತ್ಯವಿದೆ. ಹಾಲಿ 23 ಟಿಎಂಸಿ ಮಾತ್ರ ನೀರಿದೆ. ತಮಿಳುನಾಡಲ್ಲಿ ಮುಂದೆ ಮುಂಗಾರು ಬರುವ ಸಾಧ್ಯತೆ ಇದೆ. ಆದರೆ ರಾಜ್ಯದಲ್ಲಿ ಈಗಾಗಲೇ ಮುಂಗಾರು ಮುಕ್ತಾಯಗೊಂಡಿದ್ದು ಬರಗಾಲ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಮಾಡುವುದು ಸರಿಯಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net