ರೈತರ ಸಮಸ್ಯೆಗೆ ಸ್ಪಂದಿಸದ ರಾಜ್ಯ ಸರ್ಕಾರ

JDS
Published on

ರೋಣ: ರಾಜ್ಯಾದ್ಯಂತ ಅಪಾರ ಮಳೆ ಸುರಿದು ಬೆಳೆ ಹಾನಿಯಾಗಿದೆ. ಆದರೂ ಸರ್ಕಾರದ ಯಾವೊಬ್ಬ ಸಚಿವರೂ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ರೈತರ ಕಷ್ಟ ಅರಿತಿಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವೈ. ಮುಧೋಳ ಆರೋಪಿಸಿದರು.

ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲಿ ಅಥವಾ ಸಚಿವರಾಗಲಿ ರೈತರ ಸಮಸ್ಯೆಗೆ ಸ್ಪಂದಿಸಲು ಮುಂದಾಗುತ್ತಿಲ್ಲ. ಬದಲಾಗಿ ಭ್ರಷ್ಟಾಚಾರದಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ’ ಎಂದರು.

ಇದೇ ವೇಳೆ ರೋಣ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ನೇಮಕವಾದ ವಕೀಲ ಜಿ.ಬಿ. ಹನುಮನಾಳ ಅವರಿಗೆ ಆದೇಶಪತ್ರ ಹಾಗೂ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ಗಿರೀಶ ಸಂಶಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಚ್. ಕೊಪ್ಪಳ ಮಾತನಾಡಿದರು. ಜಿಲ್ಲಾ ಗ್ರಾಮೀಣ ಉಪಾಧ್ಯಕ್ಷ ನಿಂಗಪ್ಪ ಪ್ಯಾಟಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ದೇವಪ್ಪ ಮಲ್ಲಸಮುದ್ರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆಎಫ್. ದೊಡ್ಮನಿ, ರಮೇಶ ಹುಣಸೀಮರದ, ಗಜೇಂದ್ರಗಡ ತಾಲೂಕು ಅಧ್ಯಕ್ಷ ಸಂಗಪ್ಪ ಯಲಬುಣಚಿ, ನರಗುಂದ ತಾಲೂಕು ಅಧ್ಯಕ್ಷ ಎಂ.ಎಂ. ಜಾವೂರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net