ರಾಜ್ಯ ಸರ್ಕಾರ ಕಾಂಗ್ರೆಸ್ ಪಾಲಿನ ಎಟಿಎಂ; ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

bjp protest
ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟಿ.ಡಿ.ಮೇಘರಾಜ್, ಎಂ.ಬಿ.ಹರಿಕೃಷ್ಣ, ಅನೂಪ್‌ಕುಮಾರ್, ದರ್ಶನ್, ಇ.ವಿಶ್ವಾಸ್, ಮಾಲತೇಶ್, ಗಣೇಶ್, ಜಗನ್ನಾಥ್, ಅಭಿನಂದನ್ ಇದ್ದರು.
Published on

ಶಿವಮೊಗ್ಗ: ರಾಷ್ಟ್ರೀಯ ಕಾಂಗ್ರೆಸ್‌ಗೆ ಕರ್ನಾಟಕ ಸರ್ಕಾರ ಹಣ ಕೊಡುವ ಎಟಿಎಂ ಆಗಿದ್ದು ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶುಕ್ರವಾರ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಸರ್ಕಾರದ ವಿರುದ್ಧ ಅಣಕು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಖವಾಡ ಧರಿಸಿದ್ದ ಕಾರ್ಯಕರ್ತರು ಎಟಿಎಂ ಚಿತ್ರವುಳ್ಳ ಪ್ಲೇ ಕಾರ್ಡ್ ಪ್ರದರ್ಶನ ಮಾಡಿ ಗಮನ ಸೆಳೆದರು.
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ವರ್ಗಾವಣೆ ದಂಧೆ ಹೆಚ್ಚಾಗಿದೆ. ಎಲ್ಲ ಇಲಾಖೆಗಳಲ್ಲೂ ಲಂಚ ಎಂಬುದು ಮಾಮೂಲಿಯಾಗಿದೆ. ಸಚಿವರು ನೇರವಾಗಿಯೇ ಕಮಿಷನ್ ದಂಧೆಯಲ್ಲಿ ಮುಳುಗಿದ್ದಾರೆ. ಇಂದಿರಾ ಕ್ಯಾಂಟೀನ್‌ನಂತಹ ವಿಷಯದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನಾಡಹಬ್ಬ ದಸರಾದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಕಲಾವಿದರು, ಸಾಹಿತಿಗಳಲ್ಲೂ ಕಮಿಷನ್ ಕೇಳಿದ್ದು ಸರ್ಕಾರದ ಭ್ರಷ್ಟತೆ ಹೆಚ್ಚಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಬಿ.ಹರಿಕೃಷ್ಣ ಮಾತನಾಡಿದರು. ಪ್ರಮುಖರಾದ ಅನೂಪ್‌ಕುಮಾರ್, ದರ್ಶನ್, ಇ.ವಿಶ್ವಾಸ್, ಮಾಲತೇಶ್, ಗಣೇಶ್, ಜಗನ್ನಾಥ್, ಅಭಿನಂದನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net