ರಾಜ್ಯ ಹೆದ್ದಾರಿ ಮರು ಡಾಂಬರೀಕಣರ ಕಾಮಗಾರಿ

06M.D.R.1
Published on

ಮದ್ದೂರು: ತಾಲೂಕಿನ ನಿಡಘಟ್ಟ ಗ್ರಾಮದಿಂದ ಮದ್ದೂರಿನ ಕೊಲ್ಲಿ ವೃತ್ತವರೆಗೆ ಹಳೇ ಬೆಂಗಳೂರು-ಮೈಸೂರು ಚತುಷ್ಪಥ ರಾಜ್ಯ ಹೆದ್ದಾರಿಯ ಮರು ಡಾಂಬರೀಕಣರ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಶುಕ್ರವಾರ ಚಾಲನೆ ನೀಡಿದರು.


ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ 7.9 ಕೋಟಿ ರೂ.ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗೆ ಸ್ಥಳಿಯ ಜನಪ್ರತಿನಿಧಿಗಳೊಂದಿಗೆ ವಿಧ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದರು.


ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಧಿಕಾರವಧಿಯಲ್ಲಿ ಬೆಂಗಳೂರು-ಮೈಸೂರು ಚರ್ತಷ್ಪಥ ರಸ್ತೆ ನಿರ್ಮಿಸಲಾಗಿತ್ತು. ಈ ರಸ್ತೆಗೆ ಒಂದರೆಡು ಬಾರಿ ಡಾಂಬರೀಕರಣ ಮಾಡಲಾಗಿತ್ತು. ಆದರೆ, ಲಘು ಮತ್ತು ಭಾರಿ ವಾಹನಗಳ ಸಂಚಾರದಿಂದಾಗಿ ರಸ್ತೆ ಗುಂಡಿ ಬಿದ್ದುಹಾಳಾಗಿತ್ತು. ಈ ಬಗ್ಗೆ ರಾಷ್ಟ್ರೀಯ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಗತ್ಯ 7.9 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಗೆ ನಿರ್ಧರಿಸಲಾಗಿದೆ.
ನಿಡಘಟ್ಟದಿಂದ ರುದ್ರಾಕ್ಷಿಪುರ, ಸೋಮನಹಳ್ಳಿ, ಕೆಸ್ತೂರು ಕ್ರಾಸ್, ಶಿವಪುರದಿಂದ ಕೊಲ್ಲಿ ವೃತ್ತದವರೆಗೆ ರಾಜ್ಯ ಚುತುಷ್ಪಥ ರಸ್ತೆಯ ಮರು ಡಾಂಬರೀಕರಣ ಕಾರ್ಯ ಕೈಗೊಳ್ಳಲಾಗಿದೆ. ಮಳೆಗಾಲ ಹೊರತುಪಡಿಸಿ ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ.ಎಂ.ಉದಯ್ ಸ್ಪಷ್ಟಪಡಿಸಿದರು.


ಗ್ರಾಪಂ ಅಧ್ಯಕ್ಷ ತಿಮ್ಮೇಗೌಡ, ಮಾಜಿ ಅಧ್ಯಕ್ಷ ಎನ್.ಎಂ.ಪ್ರಕಾಶ್, ಮುಖಂಡರಾದ ದೊರೆಸ್ವಾಮಿ, ಶಿವು, ಮಹದೇವು, ರಾಜಣ್ಣ, ಯತೀಶ್, ಸತೀಶ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net