ರಾಜ್ಯ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ

08Jaggu2
ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋ ನೀತಿ ಖಂಡಿಸಿ ಬೆಳಗಾವಿ ತಾಲೂಕಿನ ಪಂತ ಬಾಳೇಕುಂದ್ರಿಯಲ್ಲಿ ಶುಕ್ರವಾರ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟಿಸಲಾಯಿತು.. ಈರಣ್ಣ ಕಡಾಡಿ, ಸಂಜಯ ಪಾಟೀಲ, ಎಂ.ಬಿ.ಝಿರಲಿ ಇತರರು ಇದ್ದರು.
Published on

ಬೆಳಗಾವಿ: ಕಾಂಗ್ರೆಸ್ ಸರ್ಕಾರದ ರೈತ ವಿರೋ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾ ಪದಾಕಾರಿಗಳು ತಾಲೂಕಿನ ಪಂತ ಬಾಳೇಕುಂದ್ರಿ ಬಳಿ ಬೆಳಗಾವಿ-ಬಾಗಲಕೋಟೆ ಹೆದ್ದಾರಿಯಲ್ಲಿ ಶುಕ್ರವಾರ ವಾಹನ ಸಂಚಾರ ತಡೆದು ಪ್ರತಿಭಟಿಸಿದರು.

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದು 3 ತಿಂಗಳಾಯಿತು. ರಾಜ್ಯದ ಜನರಿಗೆ 5 ಗ್ಯಾರಂಟಿ ನೀಡಿದ್ದಾರೆ. ಆದರೆ, ರೈತರಿಗೆ ಸರಿಯಾದ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈ ವರ್ಷ ಮಳೆ ಕೈಕೊಟ್ಟ ಕಾರಣ ಬೆಳೆ ನಾಶವಾಗುತ್ತಿದೆ. ಬೆಳಗೆ ನೀರು ಪೂರೈಸುವ ಬಾವಿ ಹಾಗೂ ಕೊಳವೆಬಾವಿಯಲ್ಲಿ ನೀರಿದ್ದರೂ ಪೂರಕ ವಿದ್ಯುತ್ ದೊರೆಯುತ್ತಿಲ್ಲ. ರೈತರಿಗೆ ಸಂಕಷ್ಟ ಎದುರಾಗಿದೆ. ಕೇಂದ್ರ ಸರ್ಕಾರ 6 ಸಾವಿರ ರೂ. ಹಾಗೂ ಬಿಜೆಪಿ ರಾಜ್ಯ ಸರ್ಕಾರದಲ್ಲಿ 4000 ರೂ. ಸೇರಿ ರೈತರಿಗೆ ಒಟ್ಟು 10 ಸಾವಿರ ರೂ. ಕೊಡಲಾಗುತ್ತಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯ ಸರ್ಕಾರದಿಂದ ಕೊಡುವ 4000 ರೂ. ಸ್ಥಗಿತಗೊಂಡಿದೆ.

ರೈತರ ಮಕ್ಕಳಿಗೆ ವಿದ್ಯಾರ್ಥಿ ನಿಯಲ್ಲಿ 560 ಕೋಟಿ ರೂ. ಸ್ಥಗಿತಗೊಂಡಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ರೈತರಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಸಮರ್ಪಕವಾಗಿ ಪೂರೈಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ರಾತ್ರಿ ವೇಳೆ 1 ಅಥವಾ 2 ತಾಸು ವಿದ್ಯುತ್ ನೀಡುತ್ತಿದ್ದು ನೀರು ಹಾಯಿಸಲು ರೈತರು ಹೊಲದಲ್ಲೇ ಇರುವ ಪರಿಸ್ಥಿತಿ ಬಂದಿದೆ ಎಂದು ದೂರಿದರು.

ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ ಮಾತನಾಡಿ, ಕಾಂಗ್ರೆಸ್ ಸರ್ಕಾರ ನಿದ್ದೆಗೆ ಜಾರಿ ಹೋಗಿದೆ. 7 ಗಂಟೆ ವಿದ್ಯುತ್ ನೀಡದಿದ್ದರೆ ಉಗ್ರ ಹೊರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆಸ್ಕಾಂ ಅಕಾರಿಗಳು ಶನಿವಾರದಿಂದ 7 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು. ಯುವರಾಜ ಜಾಧವ, ಶಂಕರ ಮಲ್ಲಣ್ಣವರ, ಮಲ್ಲಿಕಾರ್ಜುನ ಎಂ., ತಿಪ್ಪಾಜಿ ಮೋರೆ, ಭರಮಾ ಗೊಮ್ಮಣಾಚೆ, ಶಹಾಜಿ ಜಾಧವ, ಪಂಕಜ ಘಾಡಿ, ಪ್ರದೀಪ ಸನ್ನಿಕೊಪ್ಪ, ಶಶಿಮಾವುಲಿ ಕುಲಕರ್ಣಿ, ನಾರಾಯಣ ಪಾಟೀಲ ಹಾಗೂ ಬಿಜೆಪಿ ಕಾರ್ಯಕರ್ತರು ರೈತರು ಇದ್ದರು.

ಪಂತ ಬಾಳೇಕುಂದ್ರಿ ಹೆಸ್ಕಾಂ ಕಚೇರಿಗೆ ಮುತ್ತಿಗೆ

ಬಿಜೆಪಿ ಕಾರ್ಯಕರ್ತರು ಪಂತ ಬಾಳೇಕುಂದ್ರಿಯ ಪಂತನಗರ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದರು. ಬಳಿಕ ಬೆಳಗಾವಿ-ಬಾಗಲಕೋಟೆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ಒಂದೂವರೆ ಗಂಟೆ ಪ್ರತಿಭಟಿಸಿದರು. ರೈತರು ಚಕ್ಕಡಿ, ಟ್ರಾಕ್ಟರ್ ತಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರಿಂದ ಸಂಚಾರ ದಟ್ಟಣೆಯಾಗಿತ್ತು. ಬೆಳಗಾವಿಯ ಚನ್ನಮ್ಮ ವೃತ್ತದಲ್ಲೂ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು. ಮಾಜಿ ಶಾಸಕ ಅನಿಲ ಬೆನಕೆ, ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಝಿರಲಿ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net