ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯ ಒತ್ತೆ ಇಟ್ಟಿದೆ

bellad
Published on

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂ ವಿರೋಧಿ ಕೃತ್ಯಗಳು ಒಂದಾದ ಮೇಲೊಂದರಂತೆ ನಡೆಯುತ್ತಿದೆ. ಅಷ್ಟೇ ಅಲ್ಲದೆ, ಕಾಂಗ್ರೆಸ್ ಸರ್ಕಾರ ಇಂತಹ ಅಹಿತಕರ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವುದು ಸ್ಪಷ್ಟವಾಗಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.

ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ...ಈ ಘಟನೆಗಳು ರಾಜ್ಯ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಉದಾಹರಣೆ ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಾರ್ವಜನಿಕ ಗಣಪತಿ ವಿಸರ್ಜನೆಯ ಸಮಯದಲ್ಲಿ ಮುಸ್ಲಿಂ ಪುಂಡರು ಮೆರವಣಿಗೆಗೆ ಅಡ್ಡಿಪಡಿಸಲೆಂದೇ ದಾಂಧಲೆ ಎಬ್ಬಿಸಿ ಚಪ್ಪಲಿ ತೂರಾಟ, ಕಲ್ಲು ತೂರಾಟ, ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿರುವ ದುಷ್ಕೃತ್ಯ ಕಾಂಗ್ರೆಸ್ ಸರ್ಕಾರದ ಹದಗೆಟ್ಟ ಕಾನೂನು ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net