

ಹುಮನಾಬಾದ್: ೨೦೨೩-೨೪ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಕಪ್ಪರಗಾಂವ ಗ್ರಾಮದ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಮಾರ್ಥಂಡ ತೆಳಗೇರಿ ಆಯ್ಕೆಯಾಗಿದ್ದಾರೆ. ತೆಳಗೇರಿ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಾಳ ಅಭಿನಂದಿಸಿದ್ದು, ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು ತಾಲೂಕಿಗೆ ಹೆಮ್ಮೆ ಎಂದು ತಿಳಿಸಿದ್ದಾರೆ.