ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯಾದ್ಯಂತ ಡಿ.14ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದೆ.
ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ). ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.