ಮೈಸೂರಿನಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

Published on

ಮೈಸೂರು: ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ವಿವಿಧ ಸಂಘಟನೆಗಳಿಂದ ಆ.30ರಂದು ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್ ತಿಳಿಸಿದರು.
ಜಿ.ಎಚ್. ಫಿಟ್ನೆಸ್ ಆ್ಯಂಡ್ ಜಿಮ್, ಮೈಸೂರು ಲಯನ್ಸ್ ಕ್ಲಬ್ ಗೋಲ್ಡನ್ ಸಿಟಿ ಹಾಗೂ ಭುವನ್‌ರಾಜ್ ಫೌಂಡೇಷನ್ ಸಹಯೋಗದಲ್ಲಿ ಅಂದು ಸಂಜೆ 5.30ಕ್ಕೆ ಒಡೆಯರ್ ಕಪ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್‌ಗೌಡ, ಟಿ.ಎಸ್.ಶ್ರೀವತ್ಸ, ಎಂಎಲ್‌ಸಿ ಸಿ.ಎನ್.ಮಂಜೇಗೌಡ, ಬಿಜೆಪಿ ಮುಖಂಡ ಕವೀಶ್‌ಗೌಡ, ನಾಗರಾಜ್ ವಿ.ಭೈರಿ, ಭುವನ್‌ರಾಜ್, ಎನ್.ಚೇತನ್‌ರಾಜ್ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರಿಗೆ ಒಟ್ಟು ನಾಲ್ಕು ವಿಭಾಗಗಳಲ್ಲಿ ಪ್ರತಿಯೊಂದಕ್ಕೂ ಒಂದರಿಂದ ಐದನೇ ಸ್ಥಾನದವರೆಗೆ ನಗದು ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಆಯೋಜಕರಾದ ಸುರೇಶ್‌ಗೋಲ್ಡ್, ಇ.ಹರೀಶ್, ನವೀನ್‌ಚಂದ್ರ, ಲಕ್ಷ್ಮೀಪತಿ ಬಾಲಾಜಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net