ಮೈಸೂರು: ಸ್ಪಂದನ ಸಾಂಸ್ಕೃತಿಕ ಪರಿಷತ್ತಿನಿಂದ ಅ.20 ರಂದು ರಾಜ್ಯ ಮಟ್ಟದ ‘ದಸರಾ ಕವಿಗೋಷ್ಠಿ’ ಆಯೋಜಿಸಿದ್ದು, ನಾಡಿನ ವಿವಿಧ ಜಿಲ್ಲೆಗಳ ಆಸಕ್ತ ಕವಿ-ಕವಯತ್ರಿಯರಿಂದ ಕವನಗಳ ಆಹ್ವಾನಿಸಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ತಿಳಿಸಿದ್ದಾರೆ.
ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಕವಿಗೋಷ್ಠಿ ನಡೆಯಲಿದ್ದು, ಭಾಗವಹಿಸಲು ಇಚ್ಛಿಸುವ ಆಸಕ್ತರು ಯಾವುದೇ ವಸ್ತು ವಿಷಯ ಕುರಿತು ರಚಿಸಿದ, ತಮ್ಮ ಸ್ವ-ರಚಿತ 20 ಸಾಲುಗಳ ಮಿತಿಯೊಳಗಿನ ಎರಡು ಕವಿತೆಗಳು / ಗಜಲ್ಗಳನ್ನು ಅಥವಾ 6 ಸಾಲಿನ ಮಿತಿಯೊಳಗಿನ ಆರು ಚುಟುಕು/ಹನಿಗವಿತೆಗಳನ್ನು ಸಂಘಟಕರಿಗೆ ಕಳುಹಿಸಿಕೊಡಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಯ್ಕೆಯಾದ ಕವಿತೆಗಳ ಕವಿಗಳಿಗೆ ಪರಿಷತ್ತಿನಿಂದ ಆಯೋಜಿಸುವ ರಾಜ್ಯ ಮಟ್ಟದ ದಸರಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಅವಕಾಶ ಮಾಡಿಕೊಡಲಾಗುವುದು. ಜತೆಗೆ ಭಾಗವಹಿಸುವ ಎಲ್ಲ ಕವಿಗಳಿಗೂ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ಆಸಕ್ತ ಎಲ್ಲ ವಯೋಮಾನದ ಕವಿಗಳು ಅ.10 ರೊಳಗೆ ತಲುಪುವಂತೆ ಸ್ವ-ರಚಿತ ಎರಡು ಕವಿತೆಗಳನ್ನು ತಮ್ಮ ಸಂಕ್ಷಿಪ್ತ ಪರಿಚಯದೊಂದಿಗೆ 8317457397 ಈ ದೂರವಾಣಿ ಸಂಖ್ಯೆಗೆ ವಾಟ್ಸಾಪ್ ಮೂಲಕ ಕಳುಹಿಸಬೇಕು. ಮಾಹಿತಿಗೆ ಮೊಬೈಲ್ ಸಂಖ್ಯೆ 9880264678 ಅನ್ನು ಸಂಪರ್ಕಿಸಬಹುದು ಎಂದು ಕೋರಿದ್ದಾರೆ.