

ಮಂಗಳೂರು: ಸಂಶೋಧನೆಯು ವಿದ್ಯಾರ್ಥಿ ಜೀವನದ ಬಹುಮುಖ್ಯ ಭಾಗವಾಗಬೇಕು. ವಿದ್ಯಾರ್ಥಿಗಳು ಸಮಾಜದ ಸಮಸ್ಯೆಗಳ ಬಗ್ಗೆ ಸಂಶೋಧನೆ ಮಾಡಿ ಅದಕ್ಕೆ ಪರಿಹಾರ ಕಂಡುಹುಡುಕಿ ದೇಶದ ಪ್ರಗತಿಯಲ್ಲಿ ಕೈಜೋಡಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ವಾಣಿಜ್ಯ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಡಾ.ಪರಮೇಶ್ವರ್ ಅಭಿಪ್ರಾಯಪಟ್ಟರು.
ಕೆನರಾ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಇತ್ತೀಚೆಗೆ ನಡೆಸಿದ ‘ಸಂಶೋಧನಾ -2023’ ರಾಜ್ಯಮಟ್ಟದ ಪ್ರಬಂಧ ಮಂಡನಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಒಂಬತ್ತು ಕಾಲೇಜಿನ 60 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಾಂಶುಪಾಲರಾದ ಡಾ.ಪ್ರೇಮಲತಾ ವಿ., ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ಸ್ನಾತಕೋತ್ತರ ವಿಭಾಗದ ಸಂಯೋಜಕಿ ಸ್ವಾತಿ ನಾಯಕ್, ಕಾರ್ಯಕ್ರಮ ಸಂಘಟಕರಾದ ಡಾ.ಪ್ರಶಾಂತ್, ಮೇಘಾ ರಾವ್, ವಿದ್ಯಾರ್ಥಿ ಸಂಘಟಕರಾದ ಕೆ.ದೀಕ್ಷಾ ಶೆಣೈ, ಅಕ್ಷಯಾ ಪೈ ಹಾಜರಿದ್ದರು. ಡಾ.ಪ್ರಶಾಂತ್ ಸ್ವಾಗತಿಸಿದರು. ದೀಪ್ತಿ ಕಾರ್ಯಕ್ರಮ ನಿರೂಪಿಸಿದರು. ದೀಕ್ಷಾ ಶೆಣೈ ವಂದಿಸಿದರು.