23ರಂದು ರಾಜ್ಯಮಟ್ಟದ ರೈತ ಸಮಾವೇಶ

2
ಮೈಸೂರಿನ ಕರ್ನಾಟಕ ಮುಕ್ತ ವಿವಿ ಶತಮಾನೋತ್ಸವ ಭವನದಲ್ಲಿ ಡಿ.23ರಂದು ಬೆಳಗ್ಗೆ 11ಗಂಟೆಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ರಾಜ್ಯಮಟ್ಟದ ರೈತ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಂಬಂಧ ಎಚ್.ಡಿ.ಕೋಟೆ ತಾಲೂಕಿನ ಹಂಪಾಪುರ, ಕಂಚಮಳ್ಳಿ, ಹೊಮ್ಮರಗಳ್ಳಿ, ಮಾದಾಪುರ, ಹೈರಿಗೆ, ಹ್ಯಾಂಡ್‌ಪೋಸ್ಟ್, ಸರಗೂರು, ತುಂಬಸೋಗೆ ಗ್ರಾಮದಲ್ಲಿ ಇತ್ತೀಚೆಗೆ ಪ್ರಚಾರ ನಡೆಸಲಾಯಿತು.
Published on

ಹಂಪಾಪುರ: ಮೈಸೂರಿನ ಕರ್ನಾಟಕ ಮುಕ್ತ ವಿವಿ ಶತಮಾನೋತ್ಸವ ಭವನದಲ್ಲಿ ಡಿ.23ರಂದು ಬೆಳಗ್ಗೆ 11ಗಂಟೆಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ರಾಜ್ಯಮಟ್ಟದ ರೈತ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಂಬಂಧ ಎಚ್.ಡಿ.ಕೋಟೆ ತಾಲೂಕಿನ ಹಂಪಾಪುರ, ಕಂಚಮಳ್ಳಿ, ಹೊಮ್ಮರಗಳ್ಳಿ, ಮಾದಾಪುರ, ಹೈರಿಗೆ, ಹ್ಯಾಂಡ್‌ಪೋಸ್ಟ್, ಸರಗೂರು, ತುಂಬಸೋಗೆ ಗ್ರಾಮದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ಪ್ರಚಾರ ನಡೆಸಲಾಯಿತು.

ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ರಾಜೇಶ್ ಮಾತನಾಡಿ, ಸರ್ಕಾರ ಎಲ್ಲ ಜಯಂತಿ ಮಾಡುತ್ತದೆ. ಆದರೆ ದೇಶಕ್ಕೆ ಅನ್ನ ನೀಡುವ ರೈತರ ಹಬ್ಬ ಮಾಡುತ್ತಿಲ್ಲ. ಆದ್ದರಿಂದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಡಿ.23ರಂದು ಮೈಸೂರಿನಲ್ಲಿ ವಿಶ್ವ ರೈತ ದಿನಾಚರಣೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ವಿ.ಸೋಮಣ್ಣ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಶಂಕರ, ಕುಮಾರ್, ರಮೇಶ್, ಸುರೇಶ ಶೆಟ್ಟಿ, ಹೇಮಂತ್, ಗಂಗಾಧರ್, ಸೀನ ಗೋಗು ನಂಜಪ್ಪ ಮತ್ತು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net