ಚಿರಾಗ್‌ಗೆ ರಾಜ್ಯಮಟ್ಟದಲ್ಲಿ ಚಿನ್ನದ ಪದಕ

chirag
ಚಿರಾಗ್ ಸಿ.ಪೂಜಾರಿ
Published on

ಕಾರ್ಕಳ: ಬೆಂಗಳೂರಿನ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ನಡೆದ 16ನೇ ರಾಜ್ಯಮಟ್ಟದ ಅಂತರ್ ಶಾಲಾ ಒಲಿಂಪಿಕ್ಸ್‌ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ.ಪೂಜಾರಿ, 18ರ ವಯೋಮಾನದ ಬಾಲಕರ ವಿಭಾಗದಲ್ಲಿ 100 ಮೀ. ಹಾಗೂ 200 ಮೀ. ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದಿದ್ದಾರೆ. ಇವರು ಹೆಬ್ರಿ ಸಂತೆಕಟ್ಟೆ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿದಂಪತಿ ಪುತ್ರ. ವಿದ್ಯಾರ್ಥಿಯನ್ನು ಅಜೆಕಾರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಸಂಸ್ಥೆ ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net