ರಾಜ್ಯ ಮಟ್ಟದ ಜಿಮ್ನಾಸ್ಟಿಕ್ ಪಂದ್ಯಾವಳಿ 6ರಿಂದ

2 Dwd 2 (Geeta C.D)
Published on

ಧಾರವಾಡ: ಶಾಲಾ ಶಿಕ್ಷಣ ಇಲಾಖೆಯ ೨೦೨೩- ೨೪ನೇ ಸಾಲಿನ ರಾಜ್ಯ ಮಟ್ಟದ ಜಿಮ್ನಾಸ್ಟಿಕ್ ಪಂದ್ಯಾವಳಿಯನ್ನು ನ. 6 ಹಾಗೂ 7ರಂದು ಇಲ್ಲಿನ ಕಿಲ್ಲಾದಲ್ಲಿರುವ ಶ್ರೀ ಬಾಲಮಾರುತಿ ಸಂಸ್ಥೆಯ ಹಾರಾಡಿ ರಾಮಣ್ಣ ಶೆಟ್ಟಿ ಜಿಮ್ನಾಸ್ಟಿಕ್ಸ್ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯಮಟ್ಟದ ಜಿಮ್ನಾಸ್ಟಿಕ್ ಪಂದ್ಯಾವಳಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಧಾರವಾಡ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ತುಮಕೂರು, ಮೈಸೂರು, ಕೊಡಗು, ಹಾಸನ, ಬೆಳಗಾವಿ ಹಾಗೂ ಬಾಗಲಕೋಟೆ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಿಂದ ಸುಮಾರು 175 ಬಾಲಕ ಹಾಗೂ ಬಾಲಕಿಯರು ಹಾಗೂ 23 ತೀರ್ಪುಗಾರರು ಭಾಗವಹಿಸಲಿದ್ದಾರೆ ಎಂದರು.
ಅದಮ್ಯ ಚೇತನ ಮತ್ತು ಇಸ್ಕಾನ್ ಸಂಸ್ಥೆಗಳು ಪಂದ್ಯಾವಳಿಯಲ್ಲಿ ಮಕ್ಕಳಿಗೆ ಊಟ ಮತ್ತು ಉಪಹಾರ ನೀಡಲಿವೆ. ಡಯಟ್ ಮತ್ತು ಮಲ್ಲಸಜ್ಜನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ ಭದ್ರತೆ ಹಾಗೂ ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಹಾಗೂ ಅಽಕಾರಿಗಳು ಮತ್ತು ಶ್ರೀ ಬಾಲಮಾರುತಿ ಸಂಸ್ಥೆಯ ನಿರ್ದೇಶಕ ವಿಠ್ಠಲ ಮೂರ್ತಗುಡ್ಡೆ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net