ಇಂದಿನಿಂದ ರಾಜ್ಯಮಟ್ಟದ ಅಂತರ್ ವಿವಿ ಕಿರುನಾಟಕ ಸ್ಪರ್ಧೆ

Drama 6x4
Published on

ಮೂಡುಬಿದಿರೆ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಲ್ಲಿ ಸ್ವಾತಂತ್ರ ಹೋರಾಟ ವಿಷಯಧಾರಿತ ರಾಜ್ಯಮಟ್ಟದ ಅಂತರ್ ವಿಶ್ವವಿದ್ಯಾಲಯ ಕಿರುನಾಟಕ ಸ್ಪರ್ಧೆ ಆ.7, 8ರಂದು ಸ್ವರಾಜ್ ಮೈದಾನ ಬಲಿಯ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ.

ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುವ ಸ್ಪರ್ಧೆಯನ್ನು 7ರಂದು ಬೆಳಗ್ಗೆ 9 ಗಂಟೆಗೆ ವಿ.ವಿ. ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಉದ್ಘಾಟಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಎಂ. ಮೋಹನ ಆಳ್ವ ಅಧ್ಯಕ್ಷತೆ ವಹಿಸುವರು. ವಿವಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಡಾ.ಕಿಶೋರಿ ನಾಯಕ್ ಉಪಸ್ಥಿತರಿರುವರು.

8ರಂದು ಸಾಯಂಕಾಲ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. 2 ದಿನಗಳಲ್ಲಿ 30 ನಿಮಿಷದ 30 ನಾಟಕಗಳು ಪ್ರದರ್ಶನಗೊಳ್ಳಲಿವೆ. ಆಸಕ್ತರಿಗೆ ಉಚಿತ ಪ್ರವೇಶವಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net