ಸ್ಪರ್ಧೆಗಳು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ

udp-17-ppc
Published on

ಉಡುಪಿ: ಜೀವನಕ್ಕಾಗಿ ಮತ್ತು ಪಾರಮಾರ್ಥಿಕ ಆನಂದಕ್ಕೆ ವಿದ್ಯೆ ಅತೀ ಅಗತ್ಯ. ಸ್ಪರ್ಧೆಗಳು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಒದಗಿಸುತ್ತವೆ. ಇದರಿಂದ ಇದರಿಂದ ವಿದ್ಯಾರ್ಥಿಗಳ ಭವಿಷ್ಯವು ಉಜ್ವಲವಾಗುತ್ತದೆ ಎಂದು ಉಡುಪಿ ಅದಮಾರು ಮಠ ಶಿಕ್ಷಣ ಮಂಡಳಿ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.

ಶುಕ್ರವಾರ ಪೂರ್ಣಪ್ರಜ್ಞ ಕಾಲೇಜಿನಲ್ಲಿ (ಸ್ವಾಯತ್ತ) ನಡೆದ ರಾಜ್ಯಮಟ್ಟದ ಅಂತರ್​ಕಾಲೇಜು ಶೈಕ್ಷಣಿಕ-ಸಾಂಸ್ಕೃತಿಕ ಸ್ಪರ್ಧೆ ಪ್ರಜ್ಞಾ ಫೆಸ್ಟ್​-2024 ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ.ಎಸ್​. ಚಂದ್ರಶೇಖರ್​ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೂರ್ಣಪ್ರಜ್ಞ ಸಮೂಹ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಪಿ. ಶ್ರೀರಮಣ ಐತಾಳ್​, ಆಡಳಿತಾಧಿಕಾರಿ ಡಾ. ಎ.ಪಿ. ಭಟ್​, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಕನ್ಯಾ ಮೇರಿ, ಪಪೂ ಕಾಲೇಜಿನ ಪ್ರಾಂಶುಪಾಲೆ ಪ್ರತಿಮಾ ಬಾಳಿಗಾ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಮು ಎಲ್​., ಐಕ್ಯುಎಸಿ ಸಂಯೋಜಕ ಡಾ. ವಿನಯ್​ ಕುಮಾರ್​, ಪ್ರಜ್ಞಾ ಫೆಸ್ಟಿನ ಮುಖ್ಯ ಸಂಯೋಜಕ ಡಾ. ರಮೇಶ್​ ಟಿ.ಎಸ್​., ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾನುಷ್​ ಕೋಟ್ಯಾನ್​ ಉಪಸ್ಥಿತರಿದ್ದರು.

ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಜ್ಯೋತಿ ಆಚಾರ್ಯ ನಿರೂಪಿಸಿದರು. ವಿದ್ಯಾರ್ಥಿನಿ ಶ್ರೀರಕ್ಷಾ ಹೆಗಡೆ ಪ್ರಾರ್ಥಿಸಿ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿಜಯಲಕ್ಷಿ$್ಮ ಸಿ. ಭಟ್​ ಸ್ವಾಗತಿಸಿ, ಎಂಕಾಂ ವಿಭಾಗದ ಉಪನ್ಯಾಸಕ ಮುರುಳಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net