

ಉಡುಪಿ: ವಕೀಲರ ಸಂಘ ಮತ್ತು ಜಿಲ್ಲಾ ನ್ಯಾಯಾಲಯದ ಶತಮಾನೋತ್ತರ ರಜತ ಮಹೋತ್ಸವ ಅಂಗವಾಗಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಮಾ.1 ಮತ್ತು 2 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವಿಣ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪಂದ್ಯಾಕೂಟವನ್ನು ಮಾ.1 ರಂದು ಸಾಯಂಕಾಲ 4 ಗಂಟೆಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಾಧ್ಯಕ್ಷ ಹಾಗು ಹೈಕೋರ್ಟ್ ನ್ಯಾಯಧೀಶ ನ್ಯಾ. ಕಾಮೇಶ್ವರ್ ರಾವ್ ಉದ್ಘಾಟಿಸಲಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಹೈಕೋರ್ಟಿನ ನ್ಯಾಯಮೂರ್ತಿ ರಾಜೇಶ್ ರೈ ಕೆ., ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗು ಎಂಆರ್ಜಿ ಗ್ರೂಪಿನ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಭಾಗವಹಿಸಲಿದ್ದಾರೆ ಎಂದರು.
ಸಮಾರೋಪ
ಮಾ. 2 ರಂದು ಸಾಯಂಕಾಲ 7 ಗಂಟೆಗೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸಮಾರೋಪ ಭಾಷಣ ಮಾಡಲಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ ಪಿ.ಪಿ. ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ರಘುಪತಿ ಭಟ್ ಭಾಗವಹಿಸಲಿದ್ದಾರೆ ಎಂದರು.
ವಿವಿಧ ಉಪಸಮಿತಿಗಳ ಸಂಚಾಲಕರಾದ ಎಂ.ಶಾಂತಾರಾಮ್ ಶೆಟ್ಟಿ, ದಿವಾಕರ್ ಎಂ. ಶೆಟ್ಟಿ, ಬಿ. ನಾಗರಾಜ್, ಪ್ರವಿಣ್ ಎಂ ಪೂಜಾರಿ, ಆರೂರ್ ಸುಕೇಶ್ ಶೆಟ್ಟಿ, ಗಣೇಶ್ ಕುಮಾರ್ ಮಟ್ಟು, ಪಂದ್ಯಾಟದ ಉಸ್ತುವಾರಿಗಳಾದ ಸಚಿನ್ ಕುಮಾರ್ ಶೆಟ್ಟಿ, ಗಂಗಾಧರ ಶೇರಿಗಾರ್, ಯೋಗಿಶ್ ಕುಮಾರ್ ಸಾಲಿಗ್ರಾಮ, ಸ್ಯಾಂಡ್ರಾ ಆ್ಯನ್ಸಿಲ್ಲಾ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.