ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಶಿಬಿರ ಸಹಕಾರಿ : ಪಿಜಿಆರ್ ಸಿಂಧ್ಯಾ

 ಎಸ್‌ಡಿಎಂ ಸಿಎನ್‌ವೈಎಸ್ ರತ್ನಮ್ಮ ಸಭಾಭವನದಲ್ಲಿ ರಾಜ್ಯಮಟ್ಟದ ಶಿಬಿರವನ್ನು ಪಿಜಿಆರ್ ಸಿಂಧ್ಯಾ ಉದ್ಘಾಟಿಸಿದರು. ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ, ಎಂ.ಪ್ರಭಾಕರ್ ಭಟ್ ಮತ್ತಿತರರು ಇದ್ದರು.
ಎಸ್‌ಡಿಎಂ ಸಿಎನ್‌ವೈಎಸ್ ರತ್ನಮ್ಮ ಸಭಾಭವನದಲ್ಲಿ ರಾಜ್ಯಮಟ್ಟದ ಶಿಬಿರವನ್ನು ಪಿಜಿಆರ್ ಸಿಂಧ್ಯಾ ಉದ್ಘಾಟಿಸಿದರು. ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ, ಎಂ.ಪ್ರಭಾಕರ್ ಭಟ್ ಮತ್ತಿತರರು ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಮಕ್ಕಳು ಜೀವನದಲ್ಲಿ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಪಾಲಕರಿಗೆ ಕೃತಜ್ಞರಾಗಿರಬೇಕು. ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತರಲು ಶಿಬಿರಗಳು ಪೂರಕವಾಗಿದ್ದು, ಮಕ್ಕಳ ಬೌದ್ಧಿಕ ಬೆಳವಣಿಗೆಗೂ ಸಹಕಾರಿ ಎಂದು ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಹಾಗೂ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಸಹಭಾಗಿತ್ವದಲ್ಲಿ ಮೇ 8ರವರೆಗೆ ನಡೆಯಲಿರುವ ರಾಜ್ಯಮಟ್ಟದ ಪ್ರಕೃತಿ ಚಿಕಿತ್ಸೆ, ಯೋಗ ಹಾಗೂ ಪೌಷ್ಟಿಕ ಆಹಾರ ಮಾಹಿತಿ ಶಿಬಿರವನ್ನು ಉಜಿರೆಯ ಎಸ್‌ಡಿಎಂ ಸಿಎನ್‌ವೈಎಸ್ ರತ್ನಮ್ಮ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.
ಎಸ್‌ಡಿಎಂ ಸಿಎನ್‌ವೈ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಬಿರದ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು.
ರಾಜ್ಯ ಸಂಘಟನಾ ಆಯುಕ್ತ ಎಂ.ಪ್ರಭಾಕರ್ ಭಟ್, ಜಿಲ್ಲಾ ಗೈಡ್ಸ್ ಆಯುಕ್ತೆ ವಿಮಲಾ ರಂಗಯ್ಯ, ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ವಿಠ್ಠಲ ಶೆಟ್ಟಿ, ಜಿಲ್ಲಾ ಸಹಾಯಕ ಆಯುಕ್ತ ಬಿ.ಸೋಮಶೇಖರ್ ಶೆಟ್ಟಿ, ಶಿಬಿರ ನಿರ್ದೇಶಕ ಡಾ.ರವಿ ಎಂ.ಎನ್., ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ. ಉಪಸ್ಥಿತರಿದ್ದರು.
ಶಿಬಿರದಲ್ಲಿ ಬೆಂಗಳೂರು ಉತ್ತರದಿಂದ 8, ಬೆಳಗಾವಿಯಿಂದ 11, ಚಿತ್ರದುರ್ಗದಿಂದ 5, ದಕ್ಷಿಣ ಕನ್ನಡದಿಂದ 5, ದಾವಣಗೆರೆಯಿಂದ 1, ಧಾರವಾಡದಿಂದ 4, ಕಾರವಾರ 3, ಕೊಡಗು 9, ಮಂಡ್ಯ 15, ಮೈಸೂರು 4, ರಾಯಚೂರು 10, ತುಮಕೂರು 8, ವಿಜಯಪುರ 6, ಯಾದಗಿರಿ 6 ಸಹಿತ 14 ಜಿಲ್ಲೆಯ 95 ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net