ಮುಕ್ತ ಕರಾಟೆಯಲ್ಲಿ ತೃತೀಯ

karate
ಪ್ರಶಸ್ತಿಯೊಂದಿಗೆ ನಫೀಸತ್ ಶಾಜ್ಮಿನ.
Published on

ಬೆಳ್ತಂಗಡಿ: ಮೂಡುಬಿದಿರೆಯ ಎಂ.ಕೆ.ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ಶೋರಿನ್ ರಿಯು ಕರಾಟೆ ಅಸೋಸಿಯೇಶನ್ ಮತ್ತು ಸ್ವಾಮಿಸ್ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಷಿಪ್-2024 ಸ್ಪರ್ಧೆಯಲ್ಲಿ ಬೆಳ್ತಂಗಡಿ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ನಫೀಸತ್ ಶಾಜ್ಮಿನ ಕರಾಟೆ ಫೈಟಿಂಗ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ. ಸೆನ್ಸಾಯಿ ಅಬ್ದುಲ್ ರೆಹಮಾನ್ ಅವರಲ್ಲಿ ತರಬೇತು ಪಡೆದಿದ್ದರು. ಅವರು ಬಂಗಾಡಿಯ ಸಿದ್ದಿಕ್ ಮತ್ತು ಆಯಿಷಾ ದಂಪತಿ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net